ಮಂಗಳೂರು, 7.10.2024: ಶಾಲಾ ಶಿಕ್ಷಣ ಇಲಾಖೆ ( ಪದವಿಪೂರ್ವ ವಿಭಾಗ) ಮಂಗಳ ಮೈದಾನ, ಲೇಡಿಹಿಲ್, ಮಂಗಳೂರು ಇಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟ ದಲ್ಲಿ ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನದೊಂದಿಗೆ ಭಾಗವಹಿಸಿ , ಬಾಲಕರ ವಿಭಾಗದ ಗುಂಡು ಎಸೆತ ಸ್ಪರ್ದೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾಬೀತ್ ಇವರು ದ್ವಿತೀಯ ಸ್ಥಾನವನ್ನು ಪಡೆದು ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.
ಭಾಗವಹಿಸಿದ ಹಾಗೂ ವಿಜೇತ ಕ್ರೀಡಾಪಟುಗಳಿಗೆ ಸಂಸ್ಥೆಯ ಮಂಡಳಿ, ಪ್ರಾಂಶುಪಾಲರು ಹಾಗೂ ಸಂಯೋಜಕರು ಅಭಿನಂದಿಸಿರುತ್ತಾರೆ.