ಕಕ್ಯಪದವು, ಜು. 1: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ವತಿಯಿಂದ ನಡೆಸಲ್ಪಡುವ ಎಲ್.ಸಿ.ಆರ್. ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ 2026–27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಸತ್ ಉದ್ಘಾಟನೆ ಹಾಗೂ ನೂತನ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭವು ಬುಧವಾರ ಪೂರ್ವಾಹ್ನ 11 ಗಂಟೆಗೆ ನಡೆಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯ ಕೆ., ಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ. ನಾಯಕ್ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಆಯ್ಕೆಯಾದ ವಿದ್ಯಾರ್ಥಿ ನಾಯಕರಿಗೆ ಬ್ಯಾಡ್ಜ್ ಅಳವಡಿಸಿ, ಹೂಗುಚ್ಛ ನೀಡಿ ಅಭಿನಂದಿಸಲಾಯಿತು.

2026–27ನೇ ಸಾಲಿನ ವಿದ್ಯಾರ್ಥಿ ಸಂಸತ್‌ಗೆ 10ನೇ ತರಗತಿಯ ಹಿತೇಶ್ ಟಿ.ಆರ್. ಶಾಲಾ ನಾಯಕರಾಗಿ ಹಾಗೂ 9ನೇ ತರಗತಿಯ ನಿಶಾನ್ ಎಸ್.ಕೆ. ಉಪನಾಯಕರಾಗಿ ಆಯ್ಕೆಯಾದರು. ಆರೋಗ್ಯ ಮತ್ತು ಶಿಕ್ಷಣ ಮಂತ್ರಿಗಳಾಗಿ ಅದಿತಿ ಎಂ. ಪ್ರಭು ಹಾಗೂ ಧನ್ವಿ ವೈ. ಕುಮಾರಿ, ಶಿಸ್ತು ಮತ್ತು ಸಂವಹನ ಮಂತ್ರಿಗಳಾಗಿ ರಶ್ಮಿ ಯು. ಪ್ರಭು ಹಾಗೂ ತನ್ವಿ ಜೆ.ಪಿ., ಸಾಂಸ್ಕೃತಿಕ ಮಂತ್ರಿಗಳಾಗಿ ಶರಣ್ಯ ಹಾಗೂ ತನುಷ ಡಿ.ಬಿ., ಕ್ರೀಡಾ ಮಂತ್ರಿಗಳಾಗಿ ಸೃಜನ್ ಎಸ್.ಕೆ. ಹಾಗೂ ವಿನಿತ್ ಕೆ.ಎ., ಗುಂಪು ಪ್ರತಿನಿಧಿಗಳಾಗಿ ಸಾತ್ವಿಕ, ಸ್ವಸ್ತಿ ಶ್ರೀ, ಚಿರಾಗ್ ಕೆ.ಎಸ್. ಮತ್ತು ಗೌತಮ್ ಆಯ್ಕೆಯಾದರು.

ಮುಖ್ಯ ಶಿಕ್ಷಕಿ ವಿಜಯ ಕೆ. ಅವರು ಆಯ್ಕೆಯಾದ ಪ್ರತಿನಿಧಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ, ತಮ್ಮ ಕರ್ತವ್ಯಗಳು ಮತ್ತು ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವಂತೆ ಕರೆ ನೀಡಿದರು.

ಸಂಸ್ಥೆಯ ಸಂಯೋಜಕ ಯಶವಂತ್ ಜಿ. ನಾಯಕ್ ಅವರು ವೈಫಲ್ಯವನ್ನು ಧೈರ್ಯದಿಂದ ಸ್ವೀಕರಿಸಿ, ಯಶಸ್ಸನ್ನು ತಂಡದೊಂದಿಗೆ ಹಂಚಿಕೊಳ್ಳುವ ಗುಣವೇ ನಿಜವಾದ ನಾಯಕತ್ವದ ಲಕ್ಷಣ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಪ್ರತಿಯೊಂದು ಸಂಸ್ಥೆಯು ಯಶಸ್ವಿಯಾಗಿ ಮುನ್ನಡೆಯುವಲ್ಲಿ ನಾಯಕತ್ವ, ಶೈಕ್ಷಣಿಕ ವಾತಾವರಣ ಬಹಳ ಮುಖ್ಯ ಎಂದು ಪ್ರೇರಣಾತ್ಮಕ ಮಾತುಗಳಿಂದ ವಿದ್ಯಾರ್ಥಿಗಳಿಗೆ ಶುಭಹಾರೈಸಿ ವಿದ್ಯಾರ್ಥಿ ನಾಯಕರನ್ನು ಅಭಿನಂದಿಸಿ, ನಾಯಕತ್ವ, ಶಿಸ್ತು ಮತ್ತು ಜವಾಬ್ದಾರಿಯ ಮಹತ್ವವನ್ನು ವಿವರಿಸಿದರು.

ವಿದ್ಯಾರ್ಥಿ ರಾಫಿದ್ ಭಾನು ಸ್ವಾಗತಿಸಿದರು. ಜೇಷ್ಮ ಹಾಗೂ ನೀಷ್ಮ ಕಾರ್ಯಕ್ರಮ ನಿರೂಪಿಸಿದರು. ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮವು ವಿದ್ಯಾರ್ಥಿ ಗೌತಮ್ ನಾಯಕ್ ಅವರ ವಂದನಾರ್ಪಣೆಯೊಂದಿಗೆ ಸಮಾಪ್ತಿಯಾಯಿತು

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…