ಕಕ್ಯಪದವು, 10 ಸೆಪ್ಟೆಂಬರ್ 2025: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿನ ಪದವಿ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನವನ್ನು ಹರ್ಷೋದ್ಗಾರದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಶಿಕ್ಷಕರಿಗೆ ಗೌರವ ಸಲ್ಲಿಸಿದರು.
ಶಿಕ್ಷಕರ ದಿನದ ಅಂಗವಾಗಿ ವಿದ್ಯಾರ್ಥಿಗಳಿಂದ ಕ್ರೀಡಾ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉತ್ಸಾಹದಿಂದ ಪಾಲ್ಗೊಂಡು ದಿನವನ್ನು ಸ್ಮರಣೀಯವಾಗಿಸಿದರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರು, ಸಂಯೋಜಕರು, ಭೋಧಕ ಹಾಗೂ ಭೋಧಕೇತರ ವೃಂದದವರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕರ ಸೇವೆ ಹಾಗೂ ತ್ಯಾಗವನ್ನು ಸ್ಮರಿಸಿ ದಿನವನ್ನು ಹರ್ಷಭರಿತವಾಗಿ ಆಚರಿಸಲಾಯಿತು.