ಕಕ್ಯಪದವು, 9 ಸೆಪ್ಟೆಂಬರ್ 2025: ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಇವರ ಸಹಯೋಗದಲ್ಲಿ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆ ವಿಟ್ಲ ಇಲ್ಲಿ ನಡೆದ ಬಂಟ್ವಾಳ ತಾಲ್ಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪ್ರಾಥಮಿಕ ವಿಭಾಗದ 14 ರ ವಯೋಮಾನದ ಬಾಲಕಿಯರ ತ್ರೋಬಾಲ್ ತಂಡವು ದ್ವಿತೀಯ ಸ್ಥಾನವನ್ನು ಗಳಿಸಿದ್ದು , ಬಾಲಕರ ತ್ರೋಬಾಲ್ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ಬಾಲಕಿಯರ ತಂಡದಿಂದ ವಿದ್ಯಾರ್ಥಿನಿಯರಾದ ಅಪರ್ಣಾ, ವೇಣಿದ್ಯಾ ಮತ್ತು ಆದ್ಯ ಜಿ. ಕೆ ಇವರು ಜಿಲ್ಲಾಮಟ್ಟದ ತ್ರೋಬಾಲ್ ಪಂದ್ಯಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.
ವಿದ್ಯಾರ್ಥಿಗಳ ಈ ಕ್ರೀಡಾ ಸಾಧನೆ ಸಂಸ್ಥೆಗೆ ಹಾಗೂ ಊರಿಗೆ ಹೆಮ್ಮೆಯ ಸಂಗತಿಯಾಗಿದ್ದು ,ಜಿಲ್ಲಾ ಮಟ್ಟದಲ್ಲಿ ಬಂಟ್ವಾಳ ತಾಲ್ಲೂಕನ್ನು ಪ್ರತಿನಿಧಿಸಲಿದ್ದಾರೆ. ಈ ಪಂದ್ಯಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಸಂಸ್ಥೆಗೆ ತಾಲ್ಲೂಕು ಮಟ್ಟದ ಪ್ರಶಸ್ತಿಯನ್ನು ಒದಗಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು , ಸಂಯೋಜಕರು ,ಮುಖ್ಯ ಶಿಕ್ಷಕಿ ಹಾಗೂ ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದರು.
ಸಂಸ್ಥೆಯ ದೈಹಿಕ ಶಿಕ್ಷಕಿಯಾದ ಹರಿಣಾಕ್ಷಿ ಜಿ ಕೆ ಮತ್ತು ಶ್ರದ್ಧಾ ಇವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ತರಬೇತಿಯನ್ನು ಪಡೆದಿರುತ್ತಾರೆ.