ಕಕ್ಯಪದವು: ಎಲ್‌.ಸಿ.ಆರ್‌. ಇಂಡಿಯನ್ ಡಿಗ್ರಿ ಕಾಲೇಜು, ಕಕ್ಯಪದವುದಲ್ಲಿ ಪದವಿ ವಿಭಾಗದ ವಿದ್ಯಾರ್ಥಿನಿಯರಿಗಾಗಿ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ದಿನಾಂಕ 09/03/2026 ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ದೇಶ ಮಹಿಳೆಯರ ಸಾಧನೆ, ಹಾಗೂ ಸಮಾಜದಲ್ಲಿ ಅವರ ಮಹತ್ವದ ಪಾತ್ರದ ಜೊತೆಗೆ ಮಾನಸಿಕ ಆರೋಗ್ಯ ದ ಬಗ್ಗೆ ವಿದ್ಯಾರ್ಥಿನಿಯರಲ್ಲಿ ಜಾಗೃತಿ ಮೂಡಿಸುವುದಾಗಿತ್ತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಮತಿ ಸೌಮ್ಯ ಎನ್, ಪಿಯುಸಿ ವಿಭಾಗದ ಮುಖ್ಯಸ್ಥರು ಹಾಗೂ ಶ್ರೀಮತಿ ಚೈತ್ರ, ವಾಣಿಜ್ಯ ವಿಭಾಗದ ಉಪನ್ಯಾಸಕಿ, ಸಂಪನ್ಮೂಲ ವ್ಯಕ್ತಿಗಳಾಗಿ ಉಪಸ್ಥಿತರಿದ್ದು ತಮ್ಮ ಉಪನ್ಯಾಸದಲ್ಲಿ ಮಹಿಳೆಯರ ಶಿಕ್ಷಣದ ಮಹತ್ವ, ಸ್ವಾವಲಂಬನೆ ಮತ್ತು ಆತ್ಮವಿಶ್ವಾಸದ ಅಗತ್ಯತೆಯ ಕುರಿತು ವಿದ್ಯಾರ್ಥಿನಿಯರಿಗೆ ಪ್ರೇರಣಾದಾಯಕವಾಗಿ ವಿವರಿಸಿದರು.

ಇದೇ ಸಂದರ್ಭದಲ್ಲಿ ಅವರು ಮಾನಸಿಕ ಆರೋಗ್ಯದ ಮಹತ್ವದ ಬಗ್ಗೆ ಸಹ ವಿದ್ಯಾರ್ಥಿನಿಯರಿಗೆ ತಿಳಿಸಿದರು. ಇಂದಿನ ಕಾಲದಲ್ಲಿ ವಿದ್ಯಾರ್ಥಿಗಳು ಅನುಭವಿಸುವ ಒತ್ತಡ ಹಾಗೂ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಮಾನಸಿಕವಾಗಿ ಸದೃಢರಾಗಿರುವುದು ಅತ್ಯಂತ ಅಗತ್ಯವೆಂದು ಹೇಳಿದರು. ಧನಾತ್ಮಕ ಚಿಂತನೆ, ಉತ್ತಮ ಸ್ನೇಹ ಸಂಬಂಧಗಳು ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ ಎಂದು ಅವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಜೋಸ್ಟಾನ್ ಲೋಬೋ, ಸಂಯೋಜಕರಾದ ಯಶವಂತ ಜಿ . ನಾಯಕ್, ವಿಭಾಗದ ಮುಖ್ಯಸ್ಥರಾಗಿ ದೀಕ್ಷಿತಾ ಶೆಟ್ಟಿ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದು, ಕಾರ್ಯಕ್ರಮ ಅರ್ಥಪೂರ್ಣವಾಗಿ ಮತ್ತು ಯಶಸ್ವಿಯಾಗಿ ನೆರವೇರಿತು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…