ಜೂನ್ 05 ರಂದು ಎಲ್ ಸಿ ಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಪರಿಸರದ ಮಹತ್ವ ಮತ್ತು ಅದನ್ನು ಸಂರಕ್ಷಿಸುವ ಅಗತ್ಯತೆಯ ಜಾಗೃತಿ ಮಾಡಿಸುವ ನಿಟ್ಟಿನಲ್ಲಿ ವಿಶ್ವಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

“ನಮ್ಮ ಭೂಮಿ ನಮ್ಮ ಜವಾಬ್ದಾರಿ ” ಎಂಬ ಧ್ಯೆಯ ವಾಕ್ಕದ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವುದು ಮತ್ತು ಪ್ರಕೃತಿಯನ್ನು ರಕ್ಷಿಸುವ ಜವಾಬ್ದಾರಿಯನ್ನು ಬೆಳೆಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು. ಶಾಲೆಯ ಆವರಣದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮಕ್ಕಳು ಘೋಷ ವಾಕ್ಕಗಳನ್ನು ಮತ್ತು ಪರಿಸರ ಗೀತೆಗಳನ್ನು ಹಾಡಿದರು. ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಜೊತೆಗೂಡಿ ಶಾಲಾ ಮೈದಾನದ ಸುತ್ತಲೂ ವಿವಿಧ ಬಗೆಯ ಗಿಡಗಳನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪರಿಸರ ಸಂರಕ್ಷಣೆಯ ಕುರಿತಾದ ಘೋಷಣೆಗಳುಳ್ಳ ಫಲಕಗಳನ್ನು ಹಿಡಿದು ಜಾಗೃತಿ ಜಾಥಾ ನಡೆಸಿ” ಗಿಡ ಬೆಳೆಸಿ ಜೀವ ಉಳಿಸಿ ಪ್ಲಾಸ್ಟಿಕ್ ಮುಕ್ತ ಸಮಾಜ ನಮ್ಮದಾಗಲಿ” ಎಂಬ ಘೋಷಣೆಗಳು ಎಲ್ಲರ ಗಮನ ಸೆಳೆಯಿತು. ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳಿಗೂ ವಿವಿಧ ಚಟುವಟಿಕೆಗಳನ್ನು ನಡೆಸಿದರು.

ಈ ಕಾರ್ಯ ಕ್ರಮದಲ್ಲಿ ಪ್ರಾಥಮಿಕ ವಿಭಾಗದ ಸಹ ಶಿಕ್ಷಕರಾದ ಪ್ರಶಾಂತ್ .ಕೆ ಇವರು ಪರಿಸರ ಜಾಗೃತಿಯ ಬಗ್ಗೆ ಅರಿವು ಮೂಡಿಸಿದರು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ ಸಂಸ್ಥೆಯ ಸಂಯೋಜಕರು ಯಶವಂತ್ . ಜಿ ನಾಯಕ್ ಹಾಗೂ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯ ಕೆ. ಹಾಗೂ ಬೋಧಕ ಬೋಧಕೇತರ ವರ್ಗ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…