ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದಲ್ಲಿ ದಿನಾಂಕ 12 ಜೂನ್ 2026 ರಂದು ವಿಶ್ವ ತಂಬಾಕು ನಿರ್ಮೂಲನಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಸಹ ಶಿಕ್ಷಕರಾದ ಶ್ರೀಯುತ ಪ್ರಶಾಂತ್. ಕೆ. ಇವರು ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು ಹಾಗೂ ತಂಬಾಕು ಸೇವನೆಯ ದುಷ್ಪರಿಣಾಮಗಳು, ಕ್ಯಾನ್ಸರ್ ಸೇರಿದಂತೆ ವಿವಿಧ ರೋಗಗಳ ಬಗ್ಗೆ ಜಾಗೃತಿ ಮೂಡಿಸಿದರು. ವಿದ್ಯಾರ್ಥಿಗಳು ತಂಬಾಕು ವಿರೋಧಿ ಸಂದೇಶಗಳನ್ನು ಸಾರಿದರು. “ತಂಬಾಕು ಮುಕ್ತ ಸಮಾಜ ನಿರ್ಮಿಸೋಣ” ಎಂಬ ಘೋಷಣೆಯೊಂದಿಗೆ ಎಲ್ಲರೂ ತಂಬಾಕು ಸೇವಿಸದಿರಲು ಹಾಗೂ ಇತರರನ್ನೂ ಪ್ರೇರೇಪಿಸಲು ಪ್ರತಿಜ್ಞೆ ಸ್ವೀಕರಿಸಿದರು.

ಶಿಕ್ಷಕರು ವಿದ್ಯಾರ್ಥಿಗಳಿಗೆ ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ತಿಳಿಸಿದರು.ತಂಬಾಕು ಮುಕ್ತ ಸಮಾಜ ನಿರ್ಮಾಣದ ಅಗತ್ಯತೆಯನ್ನು ತಿಳಿಸುವ ವಿವಿಧ ಕಾರ್ಯಕ್ರಮಗಳು ಆಯೋಜಿಸಲ್ಪಟ್ಟವು.ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ತಂಬಾಕಿನ ಹಾನಿಕಾರಕ ಪರಿಣಾಮಗಳ ಬಗ್ಗೆ ಅರಿವು ಮೂಡಿಸುವಲ್ಲಿ ಯಶಸ್ವಿಯಾಯಿತು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…