ಸುರತ್ಕಲ್, 13 ಮಾರ್ಚ್ 2025: ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಟೆಕ್ನೋ ಕಲ್ಚರಲ್ ಅಂಡ್ ಸ್ಪೋರ್ಟ್ಸ್ ಫೆಸ್ಟ್, ಟೆಕ್ ಯುವ 2025 ದರಲ್ಲಿ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ವಿದ್ಯಾರ್ಥಿನಿಯರು ಥ್ರೋ -ಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಉಪಾಂತ್ಯ ಪಂದ್ಯಾಟದಲ್ಲಿ ಶ್ರೀನಿವಾಸ ಡೆಂಟಲ್ ಕಾಲೇಜು ತಂಡವನ್ನು ಮಣಿಸಿ ಫೈನಲ್ ಹಂತಕ್ಕೆ ತೆರ್ಗಡೆಗೊಂಡಿತ್ತು. ಫೈನಲ್ ನಲ್ಲಿ ಮಂಗಳೂರಿನ ಸಂತ ಅಲೋಸಿಯಸ್ ತಂಡವನ್ನು ಎದುರಿಸಿತ್ತು.
ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು, ಬೋಧಕ ಹಾಗು ಬೋಧಕೇತರ ವೃಂದದವರು ಮತ್ತು ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.