ಮುಲ್ಲಕಾಡು: ಸೈಂಟ್ ಅಲೋಶಿಯಸ್ ವಿದ್ಯಾಲಯದಲ್ಲಿ ನಡೆದ 14 ವರ್ಷ ವಯೋಮಿತಿಯ ಬಾಲಕಿಯರ ತಾಲ್ಲೂಕು ಮಟ್ಟದ ಖೋ-ಖೋ ಪಂದ್ಯಾಟದಲ್ಲಿ ಸರಕಾರಿ ಪ್ರಾಥಮಿಕ ಶಾಲೆ, ಮುಲ್ಲಕಾಡು ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.
ತಂಡದ ಮೂವರು ವಿದ್ಯಾರ್ಥಿನಿಯರು ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವುದು ಶಾಲೆಗೆ ಹೆಮ್ಮೆಯ ಸಂಗತಿಯಾಗಿದೆ. ವಿದ್ಯಾರ್ಥಿನಿಯರ ಈ ಕ್ರೀಡಾ ಸಾಧನೆಗೆ ಶಾಲೆಯ ಶಿಕ್ಷಕರು ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿ, ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡುವಂತೆ ಶುಭ ಹಾರೈಸಿದ್ದಾರೆ.