ಸ್ವಾತಂತ್ರ್ಯ ದಿನಾಚರಣೆಯ ಪಥಸಂಚಲನದಲ್ಲಿ ಮುಲ್ಲಕಾಡು ಶಾಲೆಗೆ ಪ್ರಥಮ ಸ್ಥಾನ
ಮಂಗಳೂರು, ಆಗಸ್ಟ್ 15, 2026: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಸಡಗರದಿಂದ ನೆರವೇರಿತು. ಈ ಸಂದರ್ಭದಲ್ಲಿ ನಡೆದ ಪಥಸಂಚಲನದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಮುಲ್ಲಕಾಡು (RMSA) ವತಿಯಿಂದ ಭಾರತ್ ಸೇವಾದಳ ತಂಡವು ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿತು.
ಶಾಲೆಯ ವಿದ್ಯಾರ್ಥಿಗಳು ಶಿಸ್ತು, ಸಮಯಪಾಲನೆ, ಸಮವಸ್ತ್ರ ಹಾಗೂ ಆಕರ್ಷಕ ಪಥಸಂಚಲನದ ಮೂಲಕ ಗಮನ ಸೆಳೆದರು. ಅವರ ಅತ್ಯುತ್ತಮ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತವಾಗಿದ್ದು, ಶಾಲೆಗೆ ಮತ್ತೊಮ್ಮೆ ಕೀರ್ತಿ ತಂದಿದ್ದಾರೆ.
ಈ ಸಾಧನೆಗಾಗಿ ಶಾಲೆಯ ಮುಖ್ಯೋಪಾಧ್ಯಾಯರು, ಸಹಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಹಾಗೂ ಮುಲ್ಲಕಾಡು ಶಾಲಾಭಿಮಾನಿಗಳು ವಿದ್ಯಾರ್ಥಿಗಳನ್ನು ಹಾಗೂ ಭಾರತ್ ಸೇವಾದಳದ ತಂಡವನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲಿಯೂ ಇಂತಹ ಸಾಧನೆಗಳನ್ನು ಮುಂದುವರಿಸುವಂತೆ ಶುಭ ಹಾರೈಸಿದ್ದಾರೆ.