ಶಿಕ್ಷಣಬ್ರಹ್ಮ ದಿವಂಗತ ಕುರುಂಜಿ ವೆಂಕಟರಮಣ ಗೌಡರು ಸ್ಥಾಪಿಸಿದ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆವಿಜಿ ಯವರ 13ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಅಗಸ್ಟ್ 7 ಶುಕ್ರವಾರದಂದು ನೆರವೇರಿತು.

ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ ದಿವಂಗತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪೂಜ್ಯರನ್ನು ಸ್ಮರಿಸಿಕೊಂಡರು.

ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಕಾಲೇಜಿನ ಆಡಳಿತಧಿಕಾರಿ ಚಂದ್ರಶೇಖರ ಪೇರಾಲು, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ ರೈ, ಐ.ಕ್ಯೂ.ಎ.ಸಿ ಸಂಯೋಜಕಿ ಡಾ. ಮಮತಾ ಕೆ ಮತ್ತು ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಭೋದಕ ಭೋದಕೇತರ ವೃಂದದವರು ಉಪಸ್ಥಿತರಿದ್ದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಅನುರಾಧ ಕುರುಂಜಿ ನಿರೂಪಿಸಿ ವಂದಿಸಿದರು.