ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನ ಗ್ರಂಥಪಾಲಕರಾದ ಉಮೇಶ್ ಅವರು ತಮ್ಮ ಡಾಕ್ಟರ್ ಆಫ್ ಫಿಲಾಸಫಿ (Ph.D.) ಪದವಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿರುತ್ತಾರೆ.
ಇವರು ಮಂಗಳೂರು ವಿಶ್ವವಿದ್ಯಾನಿಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಹಾಗೂ ವಿಭಾಗದ ಅಧ್ಯಕ್ಷರಾಗಿರುವ ಡಾ. ಕೆ.ಎಂ. ಖಾನ್. ಅವರ ಮಾರ್ಗದರ್ಶನದಲ್ಲಿ “Resources, Facilities and Services in Pre-University College Libraries: A Study in Dakshina Kannada and Udupi Districts.” ಎಂಬ ಶೀರ್ಷಿಕೆಯಡಿಯಲ್ಲಿ ತಮ್ಮ ಪಿಎಚ್.ಡಿ ಮಹಾಪ್ರಬಂಧದವನ್ನು ಮಂಡಿಸಿರುತ್ತಾರೆ.
ಇವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ವರ್ಗ, ವಿದ್ಯಾರ್ಥಿ ವೃಂದ ಹಾಗೂ ಬೋಧನೆಕೇತರ ಸಿಬ್ಬಂದಿಗಳು ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ.