ನಿಡ್ಲೆ, ಆಗಸ್ಟ್ 29, 2026: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ನಿಡ್ಲೆ ಇಲ್ಲಿ ನಿಡ್ಲೆ, ಕೊಕ್ಕಡ ಮತ್ತು ಪೆರ್ಲ ಕ್ಲಸ್ಟರ್‌ಗಳ ವಾಲಿಬಾಲ್ ಪಂದ್ಯಾಟವು ಆಗಸ್ಟ್ 29, 2026 ರಂದು ನಡೆಯಿತು.
ಪಂದ್ಯಾಟದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ನಿಡ್ಲೆಯ ಬಾಲಕರ ಹಾಗೂ ಬಾಲಕಿಯರ ತಂಡಗಳು ಭಾಗವಹಿಸಿ, ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡವು. ಈ ಮೂಲಕ ಶಾಲೆಗೆ ಕೀರ್ತಿ ತಂದಿರುವುದಲ್ಲದೆ, ಎರಡೂ ತಂಡಗಳು ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿವೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿ, ತಾಲ್ಲೂಕು ಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡುವಂತೆ ಶುಭ ಹಾರೈಸಿದರು.