ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನ ಬಿ.ಸಿ.ಎ. ವಿಭಾಗದ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ‘ಟೆಕ್ ಕೆಡೆಟ್ಸ್’ ಘಟಕದ ವಾರ್ಷಿಕ ಚಟುವಟಿಕೆಗಳಿಗೆ ಅಕ್ಟೋಬರ್ 6ರಂದು ಚಾಲನೆ ನೀಡಲಾಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಘಟಕದ ಲೋಗೋವನ್ನು ವಿಡಿಯೋ ಮೂಲಕ ಅನಾವರಣಗೊಳಿಸಿ, ವಾರ್ಷಿಕ ಚಟುವಟಿಕೆಗಳಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ. ಅವರು ಮಾತನಾಡಿ, ಬಿ.ಸಿ.ಎ. ವಿಭಾಗದ ವತಿಯಿಂದ ಆಯೋಜಿಸಲಾಗುವ ವಾರ್ಷಿಕ ಚಟುವಟಿಕೆಗಳಿಗೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಧರ್ ವಿ. ಹಾಗೂ ಐಕ್ಯೂಎಸಿ ಸಂಯೋಜಕರಾದ ಡಾ. ಮಮತಾ ಕೆ. ಉಪಸ್ಥಿತರಿದ್ದರು. ಬಿ.ಸಿ.ಎ. ವಿಭಾಗದ ಮುಖ್ಯಸ್ಥೆ ದೀಕ್ಷಾ ಎಂ.ಡಿ. ಅವರು ‘ಟೆಕ್ ಕೆಡೆಟ್ಸ್’ ಘಟಕದ ಉದ್ದೇಶ ಹಾಗೂ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.

ತೃತೀಯ ಬಿ.ಸಿ.ಎ. ವಿದ್ಯಾರ್ಥಿ ಸೂರ್ಯ ಸ್ವಾಗತಿಸಿ, ಕು. ಯಶಿತಾ ಕಾರ್ಯಕ್ರಮ ನಿರೂಪಿಸಿದರು. ಆಯಿಷತುಲ್ಲಾ ರಿದಾ ಫಾತಿಮಾ ವಂದಿಸಿದರು. ಬಿ.ಸಿ.ಎ. ವಿಭಾಗದ ಉಪನ್ಯಾಸಕರಾದ ರಕ್ಷಾ ಎಂ., ಸಿಂಧು, ನಿಶ್ಮಿ ರೈ ಎನ್., ಕೃಪಾ ಎ. ಹಾಗೂ ಶಿಲ್ಪಾ ರೈ ಎಂ. ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಮಂಗಳೂರಿನ ಕೋಡ್ ಲ್ಯಾಬ್ ಸಿಸ್ಟಮ್ಸ್‌ನ ಹಿರಿಯ ಡೆವಲಪರ್ ರಾಜ್ ಸ್ವಾಸ್ತಿಕ್ ಹಾಗೂ ಹಿರಿಯ ಸಾಫ್ಟ್‌ವೇರ್ ಡೆವಲಪರ್ ಮೊಹಮ್ಮದ್ ಜಝೀಲ್ ಅವರು “ತಂತ್ರಜ್ಞಾನದಲ್ಲಿನ ಉದಯೋನ್ಮುಖ ಪ್ರವೃತ್ತಿಗಳು “Emerging Trends in Technology” ಎಂಬ ವಿಷಯದ ಕುರಿತು ವಿಚಾರ ಸಂಕಿರಣ ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗೆ ಪ್ರಸ್ತುತ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗಳು ಹಾಗೂ ಹೊಸ ತಾಂತ್ರಿಕ ಪ್ರವೃತ್ತಿಗಳ ಕುರಿತು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…