ಸುಳ್ಯದ ನೆಹರೂ ಸ್ಮಾರಕ ಮಹಾವಿದ್ಯಾಲಯದ ಎನ್‌ಸಿಸಿ ಘಟಕದ ವತಿಯಿಂದ 19 ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ, ಮಡಿಕೇರಿ ಇದರ ಮಾರ್ಗದರ್ಶನದಲ್ಲಿ ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನವನ್ನು ಕಾಲೇಜಿನ ಆವರಣದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಸುಳ್ಯದ ಯೋಗ ತರಬೇತುದಾರರಾದ ಶ್ರೀಮತಿ ಉಷಾ ಕೆ. ಅವರು ಉದ್ಘಾಟಿಸಿ ಮಾತನಾಡಿ, ಯೋಗವು ದೈಹಿಕ ಆರೋಗ್ಯ, ಮಾನಸಿಕ ನೆಮ್ಮದಿ ಹಾಗೂ ಸಮತೋಲನಯುತ ಜೀವನಶೈಲಿಗೆ ಅತ್ಯಂತ ಅಗತ್ಯವಾದ ಸಾಧನವಾಗಿದ್ದು, ಪ್ರತಿಯೊಬ್ಬರೂ ತಮ್ಮ ದೈನಂದಿನ ಬದುಕಿನಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎನ್‌ಸಿಸಿ ಅಸೋಸಿಯೇಟ್ ಅಧಿಕಾರಿ ಕ್ಯಾಪ್ಟನ್ ಸೀತಾರಾಮ ಎಂ.ಡಿ. ಸ್ವಾಗತಿಸಿದರು. ವೇದಿಕೆಯಲ್ಲಿ ಐಕ್ಯೂಎಸಿ ಸಂಯೋಜಕರಾದ ಡಾ. ಮಮತಾ ಹಾಗೂ ಬಿಬಿಎ ವಿಭಾಗದ ಮುಖ್ಯಸ್ಥೆ ಶ್ರೀಮತಿ ಅನಂತಲಕ್ಷ್ಮಿ ಉಪಸ್ಥಿತರಿದ್ದರು.

ನಂತರ ಶ್ರೀಮತಿ ಉಷಾ ಕೆ. ಅವರ ನೇತೃತ್ವದಲ್ಲಿ ಯೋಗಾಭ್ಯಾಸ ನಡೆಯಿತು. ಈ ಸಂದರ್ಭದಲ್ಲಿ ವಿವಿಧ ಯೋಗಾಸನಗಳು ಹಾಗೂ ಪ್ರಾಣಾಯಾಮಗಳನ್ನು ಎನ್‌ಸಿಸಿ ಕೆಡೆಟ್‌ಗಳು ಮತ್ತು ಸಿಬ್ಬಂದಿಗಳು ಅಭ್ಯಾಸ ಮಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಎನ್‌ಸಿಸಿ ಕೆಡೆಟ್‌ಗಳು ಭಾಗವಹಿಸಿದ್ದು, ಕಾಲೇಜಿನ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಯೋಗದ ಮಹತ್ವ ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ಜಾಗೃತಿ ಮೂಡಿಸಿದ ಈ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಕೊನೆಯಲ್ಲಿ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಸಮಾಪ್ತಿಗೊಂಡಿತು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…