ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ವಿದ್ಯಾರ್ಥಿ ವೇತನ ಸಮಾರಂಭವು ದಿನಾಂಕ 8/10/2026ರಂದು ಕಾಲೇಜಿನ ಮುಖ್ಯ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ. ರವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯದ ಕಾರ್ಯದರ್ಶಿಯವರಾದ ಕೆ.ವಿ. ಹೇಮನಾಥ್ ರವರು ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ ಅವಕಾಶವಾಗಿ ಬಳಸಬೇಕೆಂದು ಕರೆ ನೀಡಿದರು.

ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಧರ.ವಿ ರವರು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಅಭಿನಂದನ್ ಬಿ.ಎಸ್, ಕ್ಷಿತಿಜ್. ಪಿ, ನಜ್ಮ. ಎಸ್, ಸಾಗರ್ ಬಿ.ಎಂ, ಗೌರವ್ ನಿಡ್ಯಮಲೆ, ಅನ್ವಿತಾ. ಆರ್. ಭಟ್, ಅಭಿಷೇಕ್ ಎಂ, ಸಂಜನಾ ಜೆ.ಎಸ್, ಪ್ರೀಕ್ಷಾ ಎಂ, ಅಂಬಿಕ ಎಂ.ಬಿ, ಅಕ್ಷತ್.ಎ.ಎಲ್, ಯುಕ್ತಿ ಕೆ.ಎಂ.ರವರಿಗೆ ಪ್ರಮಾಣವಚನ ಬೋಧಿಸಿದರು. ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿದರು.

ವೇದಿಕೆಯಲ್ಲಿ ಕಾಲೇಜಿನ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷರಾದ ಶಶ್ಮಿ ಭಟ್ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜಕರಾದ ಡಾ. ಮಮತಾ. ಕೆ ಇವರು ಉಪಸ್ಥಿತರಿದ್ದರು. ಪ್ರಸ್ತುತ ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ನೀಡುವ ವಿದ್ಯಾರ್ಥಿ ವೇತನ, ಕಾಲೇಜಿನ ಸುವರ್ಣ ಸಂಭ್ರಮದ ಭಾಗವಾಗಿ ಹಮ್ಮಿಕೊಂಡ ಕೆಸರುಗದ್ದೆ ಕ್ರೀಡಾ-ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ಅಧ್ಯಾಪಕರಿಗೆ ಮತ್ತು ಓಣಂ ಹಬ್ಬದ ಪ್ರಯುಕ್ತ ನಡೆಸಲಾದ ಸ್ಪರ್ಧಾವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಪ್ರಥಮ ಬಿ.ಕಾಂ. ವಿದ್ಯಾರ್ಥಿಗಳಾದ ಸುಮಿತ್.ಜೆ ಮತ್ತು ಗಿತೇಶ್ ಕೆ.ಪಿ ಯವರು ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅಭಿನಂದನ್ ರವರು ಸ್ವಾಗತಿಸಿ, ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆಯಾದ ನಜ್ಮ ವಂದಿಸಿದರು. ಕಾರ್ಯಕ್ರಮವನ್ನು ದ್ವಿತೀಯ ಬಿ.ಎಸ್.ಸಿ ಪ್ರತೀಕ್ಷಾ.ಬಿರವರು ನಿರೂಪಿಸಿದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…