ಕಕ್ಯಪದವು, ಆಗಸ್ಟ್ 29, 2024: ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜಿನಲ್ಲಿ ಆನ್ಲೈನ್ ಹಾಗೂ ಆಫ್ಲೈನ್ ಶಾಪಿಂಗ್ ಕುರಿತು ಚರ್ಚಾ ಗೋಷ್ಠಿ.ವಿದ್ಯಾರ್ಥಿಗಳಿಗೆ ಆನ್ಲೈನ್ ಹಾಗೂ ಆಫ್ಲೈನ್ ಶಾಪಿಂಗ್ ಕುರಿತು ಅರಿವು ಮೂಡಿಸುವ ಸಲುವಾಗಿ ಎಲ್. ಸಿ. ಆರ್ ಇಂಡಿಯನ್ ಪದವಿ ಕಾಲೇಜಿನಲ್ಲಿ ಆನ್ಲೈನ್ ಹಾಗೂ ಆಫ್ಲೈನ್ ಶಾಪಿಂಗ್ ಕುರಿತು ಚರ್ಚಾ ಗೋಷ್ಠಿ”ಯನ್ನು ನಡೆಸಲಾಯಿತು.

ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಯೋಜಕರಾದ ಯಶವಂತ್ ಜಿ ನಾಯಕ್, ಪದವಿ ವಿಭಾಗದ ಮುಖ್ಯಸ್ಥೆಯಾದ ದೀಕ್ಷಿತಾ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.ಪದವಿ ವಿಭಾಗದ ಮುಖ್ಯಸ್ಥೆಯಾದ ದೀಕ್ಷಿತಾ ಕಾರ್ಯಕ್ರಮ ನಿರೂಪಿಸಿದರು .