ಕೋಣಾಜೆ, 29 ಆಗಸ್ಟ್ 2025: ಹಾಕಿ ಆಟಗಾರ ಮೇಜರ್ ಧ್ಯಾನ್ ಚಂದ್ ರವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾ ದಿನವೆಂದು ಆಚರಿಸಲಾಗುತ್ತಿದ್ದು ಈ ದಿನದ ಅಂಗವಾಗಿ ಮಂಗಳೂರು ವಿಶ್ವವಿದ್ಯಾನಿಲಯ ಕೋಣಾಜೆ ಇಲ್ಲಿಯ ದೈಹಿಕ ಶಿಕ್ಷಣ ವಿಭಾಗವು ಉಳ್ಳಾಲ ತಾಲೂಕು ವಲಯದ ವಿದ್ಯಾರ್ಥಿಗಳಿಗೆ ಫುಟ್ಬಾಲ್ ಪಂದ್ಯಾವಳಿಯನ್ನು ಆಯೋಜಿಸಿದ್ದು, ಈ ಪಂದ್ಯಾಟದಲ್ಲಿ ಕೆ ಪಾಂಡ್ಯರಾಜ್ ಬಲ್ಲಾಳ್ ಪದವಿ ಪೂರ್ವ ಕಾಲೇಜಿನ ಹುಡುಗರ ತಂಡವು ಟಿಪ್ಪು ಸುಲ್ತಾನ್ ಪದವಿ ಪೂರ್ವ ಕಾಲೇಜಿನ ಹುಡುಗರ ತಂಡವನ್ನು 1-0 ಅಂತರದಲ್ಲಿ ಸೋಲಿಸಿ, ಗೆಲುವನ್ನು ತಮ್ಮದಾಗಿಸಿಕೊಂಡು ಕಾಲೇಜಿಗೆ ಹೆಮ್ಮೆ ತಂದಿದ್ದಾರೆ.
ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾದ ಸುಹೇಲ್ ಅಹಮದ್ ಫಾರಿಶ್ ಪಂದ್ಯದ ಅತ್ಯುತ್ತಮ ಆಟಗಾರ ಪ್ರಶಸ್ತಿಯನ್ನು ಗೆದ್ದರೆ, ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಮೊಹಮ್ಮದ್ ಅರ್ಫಾಝ್ ಎ ರವರು ಪಂದ್ಯದ ಅತ್ಯುತ್ತಮ ಸ್ಟ್ರೈಕರ್ ಪ್ರಶಸ್ತಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿರುತ್ತಾರೆ.
ಈ ವಿದ್ಯಾರ್ಥಿಗಳು ಕಾಲೇಜಿನ ರಾಷ್ಟ್ರಮಟ್ಟದ ಫುಟ್ಬಾಲ್ ತಂಡದ ಕೋಚ್ ಆದಂತಹ ಯು ಎಂ ತಮೀಮ್ ಉಳ್ಳಾಲ್ ರವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿದ್ದು, ಈಗಾಗಲೇ ಇವರ ತರಬೇತಿಯಿಂದ ಕಾಲೇಜಿಗೆ ಅನೇಕ ಪ್ರಶಸ್ತಿಗಳು ಲಭಿಸಿರುತ್ತದೆ. ಇವರ ಈ ಗೆಲುವಿಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಶಿಕ್ಷಕ ವರ್ಗದವರು ಮೆಚ್ಚುಗೆಯನ್ನು ವ್ಯಕ್ತಪಡಿಸಿ, ಶುಭ ಹಾರೈಸಿದ್ದಾರೆ.