ಉಳ್ಳಾಲ, 20 ಆಗಸ್ಟ್ 2025: ಕೆ ಪಾಂಡ್ಯರಾಜ್ ಬಳ್ಳಾಲ್ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನ ದಿನಾಚರಣೆಯನ್ನು ಆಚರಿಸಲಾಯಿತು.
ಎಲ್ಲಾ ಧರ್ಮ ಭಾಷೆ ಹಾಗೂ ರಾಜ್ಯಗಳ ಜನರಲ್ಲಿ ಸೌಹಾರ್ದತೆಯನ್ನು ಉತ್ತೇಜಿಸಿ ಎಲ್ಲರಲ್ಲೂ ಸದ್ಭಾವನೆಯನ್ನು ಮೂಡಿಸಿ ಹಿಂಸಾಚಾರವನ್ನು ತ್ಯಜಿಸುವಂತೆ ಮಾಡಲು ಇಲಾಖೆ ಸೂಚಿಸಿರುವಂತೆ, ಸದ್ಭಾವನ ದಿನದ ಮಹತ್ವವನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.
ಕೆ ಪಾಂಡೆರಾಜ್ ಬಲ್ಲಾಳ್ ವಿದ್ಯಾಸಂಸ್ಥೆಯಲ್ಲಿ ಇಂದು ಇದರ ಕುರಿತು ಪ್ರತಿಜ್ಞಾವಿಧಿಯನ್ನು ನೆರವೇರಿಸಲಾಗಿದ್ದು, ವಿದ್ಯಾ ಸಂಸ್ಥೆಯ ಶಿಕ್ಷಕ ವರ್ಗದವರು ಈ ಪ್ರತಿಜ್ಞಾ ವಿಧಿಯನ್ನು ನಡೆಸಿ ಕೊಟ್ಟರು.