ಉಳ್ಳಾಲ, 7 ಜುಲೈ 2025: 2025-26 ರ ಕೆ.ಪಾಂಡ್ಯರಾಜ್ ಬಲ್ಲಾಳ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ( ಮಂತ್ರಿ ಮಂಡಲ) ಚುನಾವಣೆಯಲ್ಲಿ ಆಯ್ಕೆಗೊಂಡ ವಿದ್ಯಾರ್ಥಿಗಳ ಅಧಿಕಾರ ಪ್ರಧಾನ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಸುನಿತಾ ಎನ್ ಕಾಮತ್ ರವರು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಎಲ್ಲರಿಗೂ ಪರಿಚಯಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಶರ್ಮಿಳ ಮುಖೇಶ್ ರಾವ್ ರವರ ನೇತೃತ್ವದಲ್ಲಿ ಮಂತ್ರಿಮಂಡಲದ ಪದಾಧಿಕಾರಿಗಳು ಪ್ರಮಾಣವಚನವನ್ನು ಸ್ವೀಕರಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಕೆ.ಪಾಂಡ್ಯರಾಜ್ ಬಲ್ಲಾಳ್ ಪದವಿ ಪೂರ್ವ ಕಾಲೇಜಿನ ಆಡಳಿತ ಸಂಸ್ಥೆಯ ಪ್ರತಿನಿಧಿಯಾದ ಶ್ರೀ ಇಶಾನ್ ಬಲ್ಲಾಳ್ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಅಧಿಕಾರ ಪ್ರಧಾನವನ್ನು (ಬ್ಯಾಜ್ ಗಳನ್ನು ) ಕೊಡುವ ಮೂಲಕ ಶುಭ ಹಾರೈಸಿ ಮಾತನಾಡಿದರು.
ನಾಯಕತ್ವದ ಗುಣವಿದ್ದರೆ ಜೀವನದ ಮುಂದಿನ ಹಂತದಲ್ಲಿ ಎಂತಹದ್ದೇ ಸವಾಲನ್ನು ಎದುರಿಸುವ ಧೈರ್ಯ ಹುಟ್ಟಿಕೊಳ್ಳುತ್ತದೆ. ನಾಯಕತ್ವದ ಮಹತ್ವ ಮತ್ತು ಶಿಸ್ತಿನ ಮೌಲ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಕೆ.ಪಾಂಡ್ಯರಾಜ್ ಬಲ್ಲಾಳ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಸೋನಿಯಾ ಸೆಬಾಸ್ಟಿಯನ್ ಕೆ.ಪಾಂಡ್ಯರಾಜ್ ಬಲ್ಲಾಳ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಶರ್ಮಿಳಾ ಮುಖೇಶ್ ರಾವ್ ಹಾಗೂ ಉಪ ಪ್ರಾಂಶುಪಾಲೆ ಶ್ರೀಮತಿ ಕವಿತಾ ಎಂ ಶೆಟ್ಟಿ ಅವರು ಉಪಸ್ಥಿತರಿದ್ದರು. ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿಯಾದ ಶ್ರೀಮತಿ ಸುನಿತಾ ಡಿ ಇವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.