ಕಕ್ಯಪದವು, ಅಕ್ಟೋಬರ್ 01, 2024: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಸಾಂಪ್ರದಾಯಿಕ ದಿನದ ಅಂಗವಾಗಿ ಪರಂಪರ ದಿನವನ್ನು ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದಲ್ಲಿ ಆಚರಿಸಲಾಯಿತು.
ಈ ಕಾರ್ಯಕ್ರಮಕ್ಕೆ ನಮ್ಮ ಶಾಲಾ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ ಶಾಲಾ ಸಂಚಾಲಕರಾದ ಯಶವಂತ್ ಜಿ ನಾಯಕ್ ಹಾಗೂ ಪ್ರೌಢ ಮತ್ತು ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿಯಾದ ವಿಜಯಾ ಕೆ ಅವರಿಗೆ ತಾಂಬೂಲ ಹಾಗೂ ಹೂ ಗುಚ್ಛವನ್ನು ನೀಡಿ ಕಾರ್ಯಕ್ರಮಕ್ಕೆ ಸ್ವಾಗತಿಸಲಾಯಿತು.

ಕಾರ್ಯಕ್ರಮದಲ್ಲಿ 6ನೇ ಯಿಂದ 10ನೇ ತರಗತಿಯ ವಿದ್ಯಾರ್ಥಿಗಳು ಭಾರತದ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ವೈಭೀತಿಯಲ್ಲಿ ಏಕತೆಯನ್ನು ಸಾರುವ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ಈ ರೀತಿಯ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಕಲಿಸುವುದು ನಮ್ಮ ವಿದ್ಯಾಸಂಸ್ಥೆಯ ಉದ್ದೇಶವಾಗಿದೆ. ಈ ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಸಮೀಕ್ಷ ಹಾಗೂ ದೀಪ್ತಿ ನಿರೂಪಿಸಿ ಅಭಿನವ್ ಸ್ವಾಗತಿಸಿ ಪ್ರಾರ್ಥನಾ ವಂದಿಸಿದರು.