ಕುಂದಾಪುರ, ಅಕ್ಟೋಬರ್19, 2024: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ, ಪ್ರಥಮ ವರ್ಷದ ಪದವಿಯ ವಿದ್ಯಾರ್ಥಿಗಳಿಗಾಗಿ ರಕ್ಷಕ – ಶಿಕ್ಷಕ ಸಭೆಯನ್ನು ಆಯೋಜಿಸಲಾಯಿತು. ಸ್ಥಳೀಯ ಪ್ರಸಿದ್ಧ ಶಿಕ್ಷಣ ಸಂಸ್ಥೆಯಾದ, ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ
ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿಯವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕುಂದಾಪುರ ಎಜುಕೇಶನ್ ಸೊಸೈಟಿ ಸುವರ್ಣ ಸಂಭ್ರಮದ ಹೊಸ್ತಿಲಿನಲ್ಲಿದೆ. ಈ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ನಾಲ್ಕು ಶಿಕ್ಷಣ ಸಂಸ್ಥೆಗಳು ಕನ್ನಡ ಕರಾವಳಿ ಭಾಗದಲ್ಲಿ ಗಮನಾರ್ಹ ಸಾಧನೆ ಮಾಡುತ್ತಿರುವುದು ಸಂತೋಷದ ಸಂಗತಿ.
ಕಾಲೇಜಿನ ಎಲ್ಲಾ ಕ್ರೀಯಾ ಚಟುವಟಿಕೆಗಳಿಗೆ ಬೆಂಬಲ ಮತ್ತು ಪ್ರೋತ್ಸಾಹ ನೀಡುತ್ತಿರುವ ಹೆತ್ತವರಿಗೆ ಹಾಗೂ ಪೋಷಕರಿಗೆ ಈ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಮೊಳಹಳ್ಳಿ ಶಾಲೆಯ ಹಿರಿಯ ಶಿಕ್ಷಕಿ ಶೋಭಾ ಸಿ ಶೆಟ್ಟಿ ಅವರು ಮುಖ್ಯ ಅತಿಥಿ ನೆಲೆಯಲ್ಲಿ
ಮಾತನಾಡಿ, ಕಾಲೇಜು ಅತ್ಯಂತ ಕಿರು ಅವಧಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಜಿಲ್ಲೆಯ ಸ್ತುತ್ಯಾರ್ಹ ಸಾಧನೆ ಮಾಡುತ್ತಿರುವುದು ಉಲ್ಲೇಖನೀಯ. ಈ ಸಂಸ್ಥೆಯಲ್ಲಿ ನಿಮ್ಮ ಮಕ್ಕಳು ವ್ಯಾಸಂಗ ಮಾಡುತ್ತಿರುವುದು ಹೆಮ್ಮೆಪಡುವ ಸಂಗತಿ. ಇಂತಹ ಸಭೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ನಿಮ್ಮ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ನಿರಂತರ ಗಮನವಹಿಸಿದರೆ ಭವಿಷ್ಯದಲ್ಲಿ ಸತ್ಪ್ರಜೆಗಳಾಗುವುದು ನಿಶ್ಚಿತ ಎಂದರು. ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು.
ಉಪ- ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ ಪ್ರಾಸ್ತಾವಿಸಿದರು. ಡೀನ್ ಡಿಸಿಪ್ಲಿನ್ ರಕ್ಷಿತ್ ರಾವ್ ಗುಜ್ಜಾಡಿ ಹಾಗೂ ಡೀನ್ಅ ಕಾಡೆಮಿಕ್ಸ್ ಗಿರಿರಾಜ ಭಟ್, ಸಂಸ್ಥೆಯ ಶಿಸ್ತು ಹಾಗೂ ಶೈಕ್ಷಣಿಕ ಬದ್ಧತೆಗಳ ಚಿತ್ರಣ ನೀಡಿದರು.
ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕರಾದ ಸತೀಶ್ ಶೆಟ್ಟಿ ವಂದಿಸಿ, ವಿದ್ಯಾರ್ಥಿನಿ ಶ್ರೇಯಾ
ಕಂಚಗೋಡು ಪ್ರಾರ್ಥಿಸಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ಭಟ್ ನಿರೂಪಿಸಿದರು.