ಕಕ್ಯಪದವು, ಆಗಸ್ಟ್ 20, 2024 : ಎಲ್ ಸಿ ಆರ್ ಇಂಡಿಯನ್ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನದ ಅಂಗವಾಗಿ ಧರ್ಮ , ಭಾಷೆ ಹಾಗೂ ರಾಜ್ಯಗಳ ಜನರಲ್ಲಿ ಸೌಹಾರ್ದತೆಯನ್ನು ಉತ್ತೇಜಿಸಿ ಎಲ್ಲರಲ್ಲೂ ಸದ್ಭಾವನೆಯನ್ನು ಮೂಡಿಸಿ ಹಿಂಸಾಚಾರವನ್ನು ತ್ಯಜಿಸುವಂತೆ ಮಾಡಲು ವಿದ್ಯಾರ್ಥಿಗಳು ಪ್ರತಿಜ್ಞೆಯನ್ನು ಸ್ವೀಕರಿಸಿದರು.

ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಯೋಜಕರಾದ ಯಶವಂತ್ ಜಿ ನಾಯಕ್, ಪದವಿ ಪೂರ್ವ ವಿಭಾಗದ ಮುಖ್ಯಸ್ಥೆಯಾದ ಸೌಮ್ಯ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.ವಿದ್ಯಾರ್ಥಿ ಕ್ಷೇಮಪಾನಾಧಿಕಾರಿ ವಿಂದ್ಯಾಶ್ರೀ ಪ್ರತಿಜ್ಞಾ ವಿಧಿಯನ್ನು ನಡೆಸಿಕೊಟ್ಟರು.