ಉಜಿರೆ, 21 ಡಿಸೆಂಬರ್ 2024: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ಡಿ. 20ರಂದು ನಡೆಯಿತು. ರಾಜ್ಯೋತ್ಸವ ಪ್ರಶಸ್ತಿ ವಿಜೇತ ‘ಬದುಕು ಕಟ್ಟೋಣ ಬನ್ನಿ’ ತಂಡದ ಸಂಚಾಲಕ, ಉದ್ಯಮಿ ಹಾಗೂ ಶಾಲಾ ಹಳೆ ವಿದ್ಯಾರ್ಥಿ ಮೋಹನ್ ಕುಮಾರ್ ಮುಖ್ಯ ಅತಿಥಿಯಾಗಿದ್ದರು.
ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಸತತ ಸೋಲುಗಳಿಂದ ಗೆಲುವು ಖಚಿತ, ಪ್ರಯತ್ನ ಮುಖ್ಯ ಎಂದು ಕಿವಿಮಾತು ಹೇಳಿದರು. ಇನ್ನೋರ್ವ ಅತಿಥಿ, ವಿಜಯ ಬ್ಯಾಂಕ್ ಪ್ರಬಂಧಕ ವಿನಾಯಕ ಹೆಗ್ಡೆ ಅವರು ಮಾತನಾಡಿದರು. “ಇಂದಿನ ಸ್ಪರ್ಧಾಯುಗದಲ್ಲಿ ಪ್ರಯತ್ನ ಮತ್ತು ಪರಿಶ್ರಮ ಅಗತ್ಯ” ಎಂದರು.
ರತ್ನಮಾನಸದ ನಿಲಯಪಾಲಕ ಯತೀಶ ಬಳಂಜ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಮುಖ್ಯೋಪಾಧ್ಯಾಯ ಸುರೇಶ್ ಕೆ. ಅಧ್ಯಕ್ಷತೆ ವಹಿಸಿದ್ದರು. ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ನೀಡಲಾಯಿತು. ಶಿಕ್ಷಕರಾದ ರಾಧಾಕೃಷ್ಣ ಮತ್ತು ತ್ರಿವೇಣಿ ಅತಿಥಿಗಳನ್ನು ಪರಿಚಯಿಸಿದರು. ಸಂಗೀತ ಸ್ವಾಗತಿಸಿದರು. ಚಂದ್ರಶೇಖರ್ ವಂದಿಸಿದರು. ಜ್ಞಾನೇಶ್ ಕಾರ್ಯಕ್ರಮ ನಿರೂಪಿಸಿದರು.