ಕಕ್ಯಪದವು, ಆಗಸ್ಟ್ 10, 2024 : ಎಲ್ ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕ – ರಕ್ಷಕ ಸಭೆಯು ಆಗಸ್ಟ್ 10 ರಂದು ಪೂರ್ವಹ್ನ 10ಗಂಟೆಗೆ ಸರಿಯಾಗಿ ಶಾಲಾ ಸಭಾಂಗಣದಲ್ಲಿ ನಡೆಯಿತು.

ಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ ನಾಯಕ್ ವಿಧ್ಯಾರ್ಥಿಗಳ ಏಳಿಗೆಯಲ್ಲಿ ಪಾಲಕರ ಹಾಗೂ ಶಿಕ್ಷಕರ ಜವಾಬ್ದಾರಿ ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ. ಆದ್ದರಿಂದ ಪಾಲಕರು ಸಹ ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕು ಎಂದರು. ಹಾಗೂ ಸಂಸ್ಥೆಯಲ್ಲಿ ಇರುವ ಸೌಲಭ್ಯಗಳನ್ನು ಹೇಳಿದರು.

ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿಯಾದ ವಿಜಯ ಕೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸಂಸ್ಥೆಯ ಕೆಲವು ನೀತಿ ನಿಯಮಾವಳಿಗಳನ್ನು ಹೇಳಿದರು. ಸಂಸ್ಥೆಯ ಸಂಚಾಲಕರಾದ ಬಬಿತಾ ಆರ್ ನಾಥ್ ಹಾಗೂ ಕಾರ್ಯದರ್ಶಿಯಾದ ಶಿವಾನಿ ಆರ್ ನಾಥ್ ರವರು ಪೋಷಕರಿಗೆ ಕೆಲವು ಕಿವಿ ಮಾತುಗಳನ್ನು ತಿಳಿಸಿದರು.

ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ ಪೋಷಕರಿಗೆ ಕೆಲವು ಮಾಹಿತಿಯನ್ನು ಅಧ್ಯಕ್ಷೀಯ ನುಡಿಗಳೊಂದಿಗೆ ಹೇಳಿದರು.ಪ್ರಸ್ತಕ ವರ್ಷದಲ್ಲಿ ಸಂಸ್ಥೆಯಲ್ಲಿ ಪಾಠ ಭೋದಿಸುವ ಶಿಕ್ಷಕರನ್ನು ಪರಿಚಯಿಸಲಾಯಿತು.

ಪಾಲಕರ ಸಭೆಯಲ್ಲಿ ಪೂರ್ವ ಪ್ರಾಥಮಿಕ,ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಮಕ್ಕಳ ಪೋಷಕರು ಭಾಗವಹಿಸಿದರು.ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕ ವೃಂದ ಹಾಗೂ ಬೋಧಕೇತರ ವರ್ಗ ಉಪಸ್ಥಿತಿಯಲ್ಲಿದ್ದರು. ಸಂಸ್ಥೆಯ ಸಹಶಿಕ್ಷಕರಾದ ಪ್ರಶಾಂತ್ ಸ್ವಾಗತಿಸಿ, ಸಹಶಿಕ್ಷಕಿಯರದ ಸೌಮ್ಯ ಬಿ.ಆರ್ ಮತ್ತು ಭವ್ಯ ಎಂ ಕಾರ್ಯಕ್ರಮ ನಿರೂಪಿಸಿ , ಸಹಶಿಕ್ಷಕಿ ಪ್ರತಿಮಾ ವಂದಿಸಿದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…