ಕಿನ್ನಿಕಂಬಳ: ರೋಸಾ ಮಿಸ್ತಿಕಾ ಪದವಿ ಪೂರ್ವ ಕಾಲೇಜಿನಲ್ಲಿ ಬಜ್ಪೆ ಆರಕ್ಷಕ ಠಾಣೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗಾಗಿ ಮಾದಕ ವ್ಯಸನದ ವಿರುದ್ಧ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿ ಶ್ರೀ ಅನಿಲ್ ಕುಮಾರ್ ಮಾತನಾಡಿ, ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯಕರ ಮತ್ತು ಜವಾಬ್ದಾರಿಯುತ ಜೀವನ ನಡೆಸುವ ಕುರಿತು ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ನೀಡಿದರು. ಯುವಜನತೆ ಮಾದಕ ವಸ್ತುಗಳ ಆಕರ್ಷಣೆಗೆ ಒಳಗಾಗದೆ ತಮ್ಮ ಶಿಕ್ಷಣ, ಆರೋಗ್ಯ ಹಾಗೂ ಭವಿಷ್ಯದತ್ತ ಗಮನಹರಿಸಬೇಕು ಎಂದು ಅವರು ಸಲಹೆ ನೀಡಿದರು.

ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ಅಪಾಯಗಳ ಕುರಿತು ಅರಿವು ಮೂಡಿಸಿ, ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಪ್ರೇರಣೆ ನೀಡಿದ ಈ ಜಾಗೃತಿ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲೆ ಭ ಅನಿತ ಲಿಡಿಯ, ಪೊಲೀಸ್ ಇಲಾಖೆ ಸಿಬ್ಬಂದಿಗಳಾದ ಶ್ರೀ ದುರ್ಗಾ ಪ್ರಸಾದ್ ಶೆಟ್ಟಿ ಹಾಗೂ ಶ್ರೀ ಮೌಲ, ಉಪನ್ಯಾಸಕಿ ಈಶಾ ಡಿಸೋಜ, ಕಾಲೇಜು ವಿದ್ಯಾರ್ಥಿ ನಾಯಕಿ ಮೇಘನಾ, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕಿ ಶ್ರೀಮತಿ ಸುಜಾತ ಸನಿಲ್ ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…