ಕುಂದಾಪುರ, 02 ಏಪ್ರಿಲ್ 2025 : ಇಲ್ಲಿನ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ ‘ಸಾವಿಷ್ಕಾರ 2025’ರ ಸಮೂಹ ನೃತ್ಯ ಸ್ಪರ್ಧೆಯಲ್ಲಿ, ಯುಗಳಗೀತೆ, ತಾಂತ್ರಿಕ ರಸಪ್ರಶ್ನೆ, ಪೋಸ್ಟರ್ ಮೇಕಿಂಗ್, ಟೆಕ್ನಿಕಲ್ ಕಾಸ್ವರ್ಡ್, ಮುಖ ವರ್ಣಿಕೆಯಲ್ಲಿ ಹಾಗೂ ವಿಡಿಯೋ ಗ್ರಾಫಿ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ಡಿ-ಬಗಿಂಗ್ನಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ತಂಡ ಎರಡನೇ ಬಾರಿ ಸಮಗ್ರ ಪುರಸ್ಕಾರವನ್ನು ತಮ್ಮದಾಗಿಸಿಕೊಂಡಿತ್ತು.
ಇವರನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಕಾಲೇಜಿನ ಆಡಳಿತ ನಿಕಾಯಕರಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಐಕ್ಯೂಎಸಿ ಮತ್ತು ಸಾಂಸ್ಕೃತಿಕ ತಂಡದ ಸಂಯೋಜಕಿ ಶ್ರೀಮತಿ ದೀಪಿಕಾ ಜಿ., ನಿರ್ವಹಣಾ ವಿಭಾಗದ ಪ್ರಾಧ್ಯಾಪಕ ರಜತ್ ಬಂಗೇರ ಅಭಿನಂದಿಸಿದ್ದಾರೆ.