ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆ, ಉಜಿರೆಯ ಪರಿಸರ ಸಂಘದ ವಿದ್ಯಾರ್ಥಿಗಳು ಅಕ್ಟೋಬರ್ 2ರಂದು ಪರಿಸರದಲ್ಲಿ ಲಭ್ಯವಿರುವ ವಸ್ತುಗಳನ್ನು ಬಳಸಿಕೊಂಡು ವಿವಿಧ ಕಲಾಕೃತಿಗಳನ್ನು ರಚಿಸಿದರು.ತೆಂಗಿನ ಗರಿ, ತೆಂಗಿನ ಗರಟೆ, ಪಿಸ್ತಾ ಚಿಪ್ಪು ಸೇರಿದಂತೆ ಪರಿಸರದಲ್ಲಿ ದೊರೆಯುವ ವಸ್ತುಗಳಿಂದ ಬೊಂಬೆಗಳು, ಚಿತ್ರಗಳು ಹಾಗೂ ವಿವಿಧ ಕಲಾಕೃತಿಗಳನ್ನು ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆಯಿಂದ ತಯಾರಿಸಿದರು.
ವಿದ್ಯಾರ್ಥಿಗಳ ಕಲಾಕೃತಿಗಳನ್ನು ವೀಕ್ಷಿಸಿದ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದವು ಮೆಚ್ಚುಗೆ ವ್ಯಕ್ತಪಡಿಸಿ, ಮಕ್ಕಳನ್ನು ಪ್ರೋತ್ಸಾಹಿಸಿದರು. ಪರಿಸರ ಸಂಘದ ಸಂಯೋಜಕರಾದ ಮೋನಪ್ಪ ಗೌಡ ಹಾಗೂ ಶ್ರೀಮತಿ ನಂದಿತಾ ಅವರು ವಿದ್ಯಾರ್ಥಿಗಳಿಗೆ ತರಬೇತಿ ಹಾಗೂ ಮಾರ್ಗದರ್ಶನ ನೀಡಿದರು.