ಉಜಿರೆ, 11 ಏಪ್ರಿಲ್ 2025: ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿ ಅಧೀನದ ಪ್ರೌಢಶಾಲೆಗಳ ಕನ್ನಡ ಮಾಧ್ಯಮ ಶಿಕ್ಷಕರಿಗೆ ಭಾಷಾವಾರು ಹಾಗೂ ವಿಷಯವಾರು ಕಾರ್ಯಾಗಾರವು ಉಜಿರೆಯ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ನಡೆಯಿತು.
ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎಲ್ಲ ಶಿಕ್ಷಕರು ಒಂದೇ ಸೂರಿನ ಅಡಿಯಲ್ಲಿ ಸೇರಿ ತಾವು ಬೋಧಿಸುತ್ತಿರುವ ವಿಷಯಗಳ ಬಗ್ಗೆ ಚರ್ಚಿಸಲು ಇದು ಒಂದು ವೇದಿಕೆಯಾಗಿದೆ ಎಂದರು.

ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ಅನುದಾನಿತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಜಯಶ್ರೀ ಜೈನ್ ಕಾರ್ಯಾಗಾರದ ಬಗ್ಗೆ ಮಾಹಿತಿ ನೀಡಿ, ವಿಷಯವಾರು ಹಾಗೂ ಭಾಷಾವಾರು ಸಂಯೋಜಕರ ಜವಾಬ್ದಾರಿಯನ್ನು ತಿಳಿಸಿದರು.
ಉಪ್ಪಿನಂಗಡಿ ಕಾಂಚನ ವೆಂಕಟಸುಬ್ರಹ್ಮಣ್ಯ ಸ್ಮಾರಕ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರಮೇಶ್ ಮಯ್ಯ, ಪಠ್ಯವಿಷಯದಲ್ಲಿ ನೈತಿಕ ಮೌಲ್ಯಗಳಿಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದ ಬಗ್ಗೆ ಪ್ರಸ್ತಾಪಿಸಿದರು.
ಪೆರಿಂಜೆ ಶ್ರೀ ಧ.ಮಂ. ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮುಕುಂದಚಂದ್ರ, “ವಿದ್ಯಾರ್ಥಿಗಳಿಗೆ ಉಪಯೋಗವಾಗುವ ರೀತಿಯಲ್ಲಿ ಕೆಲಸವನ್ನು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸೋಣ” ಎಂದರು.
ಉಜಿರೆ ಶ್ರೀ ಧ ಮಂ ಸೆಕೆಂಡರಿ ಶಾಲೆಯ ಹಿರಿಯ ಶಿಕ್ಷಕಿ ವಿದ್ಯಾ ಕಿರಣ್, ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಹಿರಿಯ ಶಿಕ್ಷಕ ಗಣೇಶ್ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ಕನ್ನಡ ಅಧ್ಯಾಪಕ ರಾಧಾಕೃಷ್ಣ ಕಾರ್ಯಕ್ರಮ ನಿರೂಪಿಸಿದರು.