ಎಡಪದವು, ಸೆಪ್ಟೆಂಬರ್ 2, 2024 : ವರದಿ ಮತ್ತು ಲೇಖನಗಳಂತಹ ರೂಪಗಳಿಗೆ ಮಾತ್ರ ಸೀಮಿತವಾಗಿದ್ದುದರಿಂದ, ಇವು ಇಂದು ತಮ್ಮ ವ್ಯಾಪ್ತಿಯನ್ನು ವಿಸ್ತರಿಸಿಕೊಂಡು ಸಾಮಾಜಿಕ ಜಾಲತಾಣಗಳ ಮಹತ್ವವನ್ನು ಗಮನಿಸತೊಡಗಿವೆ. ಮಾಧ್ಯಮವು ಉದ್ಯಮವಾಗಿ ಬದಲಾಗುತ್ತಿದೆ. ಮಾಧ್ಯಮಲೋಕದಲ್ಲಿ ಅನೇಕ ಋಣಾತ್ಮಕ ಅಂಶಗಳು ಇದ್ದರೂ, ಮಾಧ್ಯಮದ ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳ್ಳಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗದ ಪ್ರಾಧ್ಯಾಪಕ ಡಾ. ಶ್ರೀನಿವಾಸ ಹೊಡೆಯಾಳ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಡಬಿದ್ರೆ ತಾಲೂಕು ಘಟಕ ಮತ್ತು ಸ್ವಾಮಿ ವಿವೇಕಾನಂದ ಕಾಲೇಜು ಎಡಪದವು ಜಂಟಿ ಆಶ್ರಯದಲ್ಲಿ ನಡೆದ ‘ಮಾಧ್ಯಮ ಮತ್ತು ಯುವಜನತೆ’ ವಿಷಯದ ಕುರಿತು ನಡೆದ ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಸಾಮಾಜಿಕ ಜಾಲತಾಣಗಳು ಅಪಾಯಕಾರಿ ಪರಿಣಾಮಗಳನ್ನು ವಿಶ್ಲೇಷಿಸಿದರು.
ಅಧ್ಯಕ್ಷರಾದ ಡಾ.ವೇಣುಗೋಪಾಲ ಶೆಟ್ಟಿ ಕ ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ತು ಮೂಡಬಿದ್ರೆ ತಾಲೂಕು ಘಟಕ ಇವರು ಕನ್ನಡ ಹೇಗೆ ಬೆಳೆಯಬೇಕು, ಹೇಗೆ ಉಳಿಸಬೇಕು ಮತ್ತು ಅದರ ಪ್ರಾಮುಖ್ಯತೆ ವಿವರಿಸಿದರು.
ಪ್ರಾಂಶುಪಾಲರಾದ ಶ್ರೀಮತಿ ಗಾಯತ್ರಿ ಇವರು ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ವೇದಿಕೆಯಲ್ಲಿ ಆಡಳಿತ ಅಧಿಕಾರಿ ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕರಾದ ಶ್ರೀ ಪ್ರೇಮನಾಥ ಶೆಟ್ಟಿ ಪ್ರೌಢಶಾಲಾ ವಿಭಾಗದ ಮುಖ್ಯಸ್ಥರಾದ ಶ್ರೀ ಸುಬ್ರಹ್ಮಣ್ಯ ಮೊಗರಾಯರು ಉಪಸ್ಥಿತರಿದ್ದರು.