ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ
ಶಿಮಂತೂರು, 21 ಜೂನ್ 2025: ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ಶಿಮಂತೂರಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ 2025ನ್ನು ಜಾಗತಿಕ ಥೀಮ್ ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಧ್ಯೇಯದೊಂದಿಗೆ ಅತ್ಯಂತ ಉತ್ಸಾಹದಿಂದ ಆಚರಿಸಲಾಯಿತು.

ಯೋಗವು ಮನಸ್ಸು ಮತ್ತು ದೇಹಕ್ಕೆ ಯೋಗ ನೀಡುವ ಅದ್ಭುತ ಲಾಭಗಳನ್ನು ಶಿಕ್ಷಕಿ ದೀಪ ವಿವರಿಸಿದರು. ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ್ದರು.

ಶಾಲಾ ಪ್ರಾಂಶುಪಾಲರಾದ ಜಿತೇಂದ್ರ ವಿ ರಾವ್ ಉಪಸ್ಥಿತರಿದ್ದರು. ಶಿಕ್ಷಕಿ ಅಮಿತ ನಿರೂಪಿಸಿದರು, ನಿಶ್ಮಿತಾ ಪ್ರತಿಜ್ಞಾ ವಿಧಿ ಬೋಧಿಸಿದರು.