ಎಡಪದವು: ಸ್ಥಳೀಯ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢಶಾಲಾ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಹಾಗೂ ವಿಶ್ವ ತಂಬಾಕು ರಹಿತ ದಿನಾಚರಣೆ ಮತ್ತು ಮಾದಕ ವಸ್ತುಗಳ ಕಳ್ಳ ಸಾಗಣೆ ತಡೆ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಪೊಲೀಸ್ ಇಲಾಖೆ ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಕಾಲೇಜಿನ ಸಭಾಂಗಣದಲ್ಲಿ ಇಂದು ಸರಳ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ವ್ಯಸನಗಳಿಂದಾಗುವ ದುಷ್ಪರಿಣಾಮಗಳು ಅದನ್ನು ತಡೆಯುವ ಕುರಿತಾದಂತಹ ಅನೇಕ ಮಾಹಿತಿಗಳನ್ನು ಪೋಲಿಸ್ ವರಿಷ್ಠಾಧಿಕಾರಿಗಳ ಹಾಗೂ ಪೂಜ್ಯ ರಾಜಶ್ರೀ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಮೂಲಕ ಮಕ್ಕಳಿಗೆ ತಲುಪಿಸಲಾಯಿತು.
ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಶ್ರೀಮತಿ ನೇತ್ರಾವತಿ N. ಹೆಗ್ಡೆ ಸೇವಾ ಪ್ರತಿನಿಧಿ ಹಾಗೂ ನಿಕಟ ಪೂರ್ವ ತೆಂಕ. ಎಡಪದವು ಗ್ರಾಮಪಂಚಾಯತ್ ಉಪಾಧ್ಯಕ್ಷರಾಗಿದ್ದ ಶ್ರೀ ಗಂಗಾಧರ್ ಹಾಗೂ ಪಂಚಾಯತ್ ಸದಸ್ಯರಾಗಿದ್ದ ಶ್ರೀ ಕುಶಾಲ್ ಕುಮಾರ್ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಗಾಯತ್ರಿ ಎಸ್. ಪ್ರಭು ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕ ಶ್ರೀ ವಾಸು. ಕೆ. ಇವರುಗಳ ಉಪಸ್ಥಿತಿಯಲ್ಲಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯ್ತು.
ಪೊಲೀಸ್ ಇಲಾಖಾ ವತಿಯಿಂದ ಬಜ್ಪೆ ಠಾಣೆಯ PSI ಲತಾ ಮೇಡಂ, A.S.I. ಸೂರಜ್ ಶೆಟ್ಟಿ, H. C. ದಯಾನಂದ್, H. C. ಮಹಾಂತಯ್ಯ ಹಾಗೂ WPC ವಿದ್ಯಾ ಇವರುಗಳ ತಂಡ ಕಾರ್ಯಕ್ರಮಕ್ಕೆ ಆಗಮಿಸಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಬಗ್ಗೆ ಜಾಗೃತಿ, ಪೋಕ್ಸೋ ಕಾಯ್ದೆ, ಕಾನೂನು ಬಾಹಿರವಾದ ಅಪ್ರಾಪ್ತ ವಯಸ್ಕರ ಹೆಲ್ಮೆಟ್ ರಹಿತ ಹಾಗೂ ಪರವಾನಗಿ ರಹಿತ ದ್ವಿಚಕ್ರ ವಾಹನ ಚಾಲನೆ, ಮೊಬೈಲ್ ಅತಿ ಬಳಕೆ, ಸಾಮಾಜಿಕ ಜಾಲ ತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ಬುಕ್, ಸ್ನ್ಯಾಪ್ ಚಾಟ್ ಗಳಬಳಕೆ ಮತ್ತು ಅವುಗಳಿಂದಾಗುವ ಅನಾಹುತಗಳ ಬಗ್ಗೆ ವಿದ್ಯಾರ್ಥಿಗಳಿಗೆ ಕಿವಿ ಮಾತುಗಳನ್ನಾಡಿ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಹಾಗೂ ಭವಿಷ್ಯಕ್ಕೆ ಶುಭವನ್ನು ಹಾರೈಸಿದರು ಗ್ರಾಮಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಶ್ರೀಮತಿ ನೇತ್ರಾವತಿ ಕಾರ್ಯಕ್ರಮ ನಿರೂಪಿಸಿ ಮುಖ್ಯ ಶಿಕ್ಷಕ ಶ್ರೀ ವಾಸು ಕೆ ಇವರ ವಂದನಾರ್ಪಣೆ ಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.