ಕಕ್ಯಪದವು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ದೀಪ್ತಿ ಕೆ 625 ರಲ್ಲಿ 616ಅಂಕವನ್ನು ಪಡೆದು ರಾಜ್ಯಕ್ಕೆ ಹತ್ತನೇ ಸ್ಥಾನ‌ ಗಳಿಸಿ, ಶಾಲೆಗೆ ಪ್ರಥಮ ಸ್ಥಾನದಿಂದ ತೇರ್ಗೆಡೆ ಹೊಂದಿದ್ದಾರೆ. ಇವರು ತೆಂಕಕಜೆಕಾರು ಗ್ರಾಮದ ಕೊಡಂಗೆ ನಿವಾಸಿ ರವಿ ಕೆ ಮತ್ತು ಮೀನಾಕ್ಷಿ ದಂಪತಿ ಪುತ್ರಿ.

ವಿಧ್ಯಾರ್ಥಿನಿ ದೀಪ್ತಿ, ಕನ್ನಡ ಹಾಗೂ ಹಿಂದಿ ವಿಷಯದಲ್ಲಿ ಪೂರ್ಣ ಅಂಕ ಗಳಿಸಿದ್ದು, ಈ ಹಿಂದೆ ಸಮಾಜ ವಿಜ್ಞಾನ ವಿಷಯದಲ್ಲಿ 95 ಅಂಕ ಗಳಿಸಿದ್ದರು. ಆದರೆ ಮರು ಮೌಲ್ಯ ಮಾಪನದಲ್ಲಿ ಎರಡು ಅಂಕ ಹೆಚ್ಚು ಗಳಿಸಿ 97 ಅಂಕಗಳೊಂದಿಗೆ ಒಟ್ಟು ಫಲಿತಾಂಶ 98.56 ಪಡೆದಿರುತ್ತಾರೆ.

ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಎಲ್‌ಸಿಆರ್ ಇಂಡಿಯನ್ ವಿದ್ಯಾಸಂಸ್ಥೆ ಕಳೆದ ಹತ್ತು ವರ್ಷಗಳಿಂದ ಶೈಕ್ಷಣಿಕ, ಕ್ರೀಡೆ, ಸಾಂಸ್ಕೃತಿಕ ಸಹಿತ ಇನ್ನಿತರ ಕಾರ್ಯ ಚಟುವಟಿಕೆಯಲ್ಲಿ ರಾಷ್ಟ್ರ, ರಾಜ್ಯ, ಜಿಲ್ಲೆ, ತಾಲೂಕಿನಲ್ಲಿ ಸಾಧನೆಗೈದು ಹೆಸರುವಾಸಿಯಾಗಿದೆ. ಗ್ರಾಮೀಣ ಭಾಗದಲ್ಲಿರುವ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಾಕ್ಷಿಯಾಗಿದೆ.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಆಚರಣೆ.

ಕಕ್ಯಪದವು, ಆಗಸ್ಟ್ 15, 2024 : ಎಲ್ ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ…

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಆಟಿಡೊಂಜಿ ದಿನಾಚರಣೆ

ಕಕ್ಯಪದವು, 06 ಆಗಸ್ಟ್ 2025: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ…