ಸಂತ ಜೋಸೆಫರ ಪದವಿ ಪೂರ್ವ ಕಾಲೇಜು ಬಜ್ಪೆ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇವರ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾವಳಿಯು ದಿನಾಂಕ 24-10-2026 ರಂದು ನಡೆಯಿತು.

ಪಂದ್ಯಾವಳಿಯನ್ನು ಉದ್ಘಾಟನೆ ಮಾಡಿದ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ವಂದನೀಯ ಬ್ರ. ಹೆಕ್ಟರ್ ಬಿ. ಎನ್ ಪಿಂಟೋರವರು ಕ್ರೀಡಾ ಸ್ಫೂರ್ತಿಯಿಂದ ಆಡಿ ಮುಂದಿನ ಹಂತಗಳಿಗೆ ಬೇಕಾದ ನೈಪುಣ್ಯತೆಯನ್ನು ಮೈಗೂಡಿಸಿಕೊಂಡು ಯಶಸ್ಸನ್ನು ಪಡೆಯಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾಲೇಜಿನ ಸಂಚಾಲಕರಾದ ವಂದನೀಯ ಫಾ. ಆಂಡ್ರೂ ಡಿಸೋಜರವರು ಅಧ್ಯಕ್ಷತೆಯನ್ನು ವಹಿಸಿ ಕ್ರೀಡೆಯ ಮಹತ್ವವನ್ನು ತಿಳಿಸಿದರು. ಬಜ್ಪೆ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಸಿರಿಲ್ ಲೀವಿಸ್ ರವರು, ಶ್ರೀ ವಿವೇಕಾನಂದ ಪದವಿ ಪೂರ್ವ ಕಾಲೇಜು, ಎಡಪದವು ಇಲ್ಲಿನ ದೈಹಿಕ ಶಿಕ್ಷಣ ಉಪನ್ಯಾಸಕರೂ ಜಿಲ್ಲಾ ಕ್ರೀಡಾ ಸಂಯೋಜಕರಾದ ಶ್ರೀ ಪ್ರೇಮನಾಥ ಶೆಟ್ಟಿಯವರು, ಸಂತ ಜೋಸೆಫರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಆಲ್ವಿನ್ ಅರುಣ್ ನೊರೊನ್ಹ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಭಾರ ಪ್ರಾಂಶುಪಾಲರು ಸ್ವಾಗತಿಸಿದರು. ಆತಿಥೇಯ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ಶ್ರೀ ಅರುಣ್ ಡಿಸೋಜ ಅವರು ಕ್ರೀಡಾ ಕೂಟದ ನೇತೃತ್ವ ವಹಿಸಿ ವಂದಿಸಿದರು. ಕನ್ನಡ ಉಪನ್ಯಾಸಕರಾದ ಶ್ರೀ ರಾಮಪ್ರಸಾದ್ ಡಿ. ಆರ್. ಕಾರ್ಯಕ್ರಮ ನಿರ್ವಹಿಸಿದರು

ಜಿಲ್ಲೆಯ ವಿವಿಧ ತಾಲೂಕುಗಳ ಏಳು ತಂಡಗಳು ಭಾಗವಹಿಸಿದ್ದು ಅಂತಿಮವಾಗಿ ಆತಿಥೇಯ ಸಂತ ಜೋಸೆಫರ ಪದವಿ ಪೂರ್ವ ಕಾಲೇಜು, ಬಜ್ಪೆ ತಂಡವು ವಿಜಯಿಯಾಯಿತು. ಸಂತ ಅಲೋಶಿಯಸ್ ಕಾಲೇಜು ಮಂಗಳೂರು ತಂಡವು ದ್ವಿತೀಯ ಸ್ಥಾನ ಮತ್ತು ಶಾರದಾ ಪದವಿ ಪೂರ್ವ ಕಾಲೇಜು, ಕೊಡಿಯಾಲ್ ಬೈಲ್ ಮಂಗಳೂರು ತ್ರಿತೀಯ ಸ್ಥಾನ ಪಡೆದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…