ಬಜ್ಪೆಯ ಸಂತ ಜೋಸೆಫರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 30-06-2026 ರಂದು ನಡೆಯಿತು. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಬೆಸೆಂಟ್ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಶ್ರೀ ರೂಪಾಕ್ಷ ಎಂ. ವಿದ್ಯಾರ್ಥಿಗಳನ್ನುದ್ದೇಶಿಸಿ ನಾಯಕತ್ವ ಮತ್ತು ಜೀವನ ಮೌಲ್ಯಗಳ ಬಗ್ಗೆ ಮಾತನಾಡಿದರು. ಪ್ರಭಾರ ಪ್ರಾಂಶುಪಾಲರು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕರಾದ ಶ್ರೀ ಅರುಣ್ ಡಿಸೋಜ ಕಾರ್ಯಕ್ರಮ ಸಂಯೋಜಿಸಿ, ಜೀವಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ರೈನಾ ರಾಡ್ರಿಗಸ್ ನಿರೂಪಿಸಿದರು.

ಇದೇ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಗ್ರೃಹ ಇಲಾಖೆ ಹಾಗೂ ಧಾರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಅಂತರಜಾಲದ ಮೂಲಕ ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬಜ್ಪೆ ಆರಕ್ಷಕ ಠಾಣೆಯ ಎಎಸ್ಐ ಶ್ರೀ ಕಾಂತಿನಾಥ ಮತ್ತು ಧಾರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರೀಮತಿ ಅರುಣಾ ಮತ್ತಿತರು ಸಹಕರಿಸಿದರು.

ಕಾಲೇಜಿನ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…