ಸುಳ್ಯ: ಶಾಲಾ ಶಿಕ್ಷಣ ಇಲಾಖೆ ಹಾಗೂ ತುಂಬೆ ವಿದ್ಯಾಸಂಸ್ಥೆಯ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯ ಜಾವಲಿನ್ ಎಸೆತ ವಿಭಾಗದಲ್ಲಿ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ವಮಿಕ ಎಸ್. ರೈ ತೃತೀಯ ಸ್ಥಾನ ಗಳಿಸಿದ್ದಾರೆ.
ವಿದ್ಯಾರ್ಥಿನಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ ಹಾಗೂ ಪುಷ್ಪವೇಣಿ ಅವರು ತರಬೇತಿ ನೀಡಿರುತ್ತಾರೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯ ಜೊತೆ ಕಾರ್ಯದರ್ಶಿ ರೆ. ಫಾ. ಆಲ್ವಿನ್ ಅಡ್ವರ್ಡ್ ಡಿಕುನ್ನ, ಮುಖ್ಯೋಪಾಧ್ಯಾಯಿನಿ ಸಿ. ಮೇರಿ ಸ್ಟೆಲ್ಲಾ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.