ಬಜ್ಪೆ, 27 ಜೂನ್ 2025: ಮಾದಕದ್ರವ್ಯ ದುರುಪಯೋಗ ಮತ್ತು ಕಳ್ಳ ಸಾಗಣೆ ವಿರುದ್ಧ ಅಂತರ ರಾಷ್ಟ್ರೀಯ ದಿನಾಚರಣೆಯ ಅಂಗವಾಗಿ ಬಜ್ಪೆಯ ಸೈಂಟ್ ಜೋಸೆಫ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಮಾಹಿತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಬಜ್ಪೆ ಆರಕ್ಷಕ ಠಾಣೆಯ ವೃತ್ತ ನಿರೀಕ್ಷಕರಾದ ಶ್ರೀ ಸಂದೀಪ್ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಬಳಕೆ ವಿರುದ್ಧ ಮಾಹಿತಿ ನೀಡಿ, ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಗಳಾಗದಂತೆ ಎಚ್ಚರಿಕೆಯ ಸಂದೇಶ ನೀಡಿದರು.

ಕಾಲೇಜಿನ ಪ್ರಾಂಶುಪಾಲರು ಸ್ವಾಗತಿಸಿದರು. ಎಲ್ಲಾ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಕಚೇರಿ ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಅರಿವು ಮೂಡಿಸುವಲ್ಲಿ ಮುಖ್ಯ ಪಾತ್ರ ವಹಿಸಿತು.