ಬಜ್ಪೆ, ಸೆಪ್ಟೆಂಬರ್ 5, 2026: ಬಜ್ಪೆಯ ಸಂತ ಜೋಸೆಫರ ಪದವಿ ಪೂರ್ವ ಕಾಲೇಜಿನಲ್ಲಿ ಸೆಪ್ಟೆಂಬರ್ 5, 2026 ರಂದು ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಭಾರತದ ಮಾಜಿ ರಾಷ್ಟ್ರಪತಿ ಹಾಗೂ ಖ್ಯಾತ ಶಿಕ್ಷಣತಜ್ಞರಾದ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಪ್ರಭಾರ ಪ್ರಾಂಶುಪಾಲರಾದ ಶ್ರೀ ಅರುಣ್ ಡಿಸೋಜ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ಸಿಬ್ಬಂದಿಯನ್ನು ಗೌರವಿಸಲಾಯಿತು.
ಕಾಲೇಜಿನ ವಿದ್ಯಾರ್ಥಿ ಪರಿಷತ್ ಅಧ್ಯಕ್ಷೆ ಕುಮಾರಿ ಒಲ್ವಿಟ ವಿಯೋಲ ರಾಡ್ರಿಗಸ್ ಅವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿದರು. ಶಿಕ್ಷಕರ ಸೇವೆ, ಮಾರ್ಗದರ್ಶನ ಮತ್ತು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಅವರ ಪಾತ್ರವನ್ನು ಸ್ಮರಿಸುವ ಮೂಲಕ ಕಾರ್ಯಕ್ರಮವು ಅರ್ಥಪೂರ್ಣವಾಗಿ ನೆರವೇರಿತು.