ಕಕ್ಯಪದವು, ಸಪ್ಟೆಂಬರ್ 12, 2024 : ಎಲ್.ಸಿ.ಆರ್ ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿನ ಪದವಿ ವಿಭಾಗದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯೊಂದಿಗೆ ಶೈಕ್ಷಣಿಕ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡುವುದರೊಂದಿಗೆ ಪ್ರಥಮ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಪದವಿ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಂದ್ಯಾಶ್ರೀ .ಎ ಮಾತನಾಡಿ ವಿದ್ಯಾರ್ಥಿ ಶಕ್ತಿಯು ಅನಾವರಣಗೊಳ್ಳಬೇಕಾದರೆ ಸಾಂಘಿಕ ಪ್ರಯತ್ನಗಳು ಸಂಘದ ಮೂಲಕ ನಡೆಯಬೇಕು.ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು, ಜ್ಞಾನವನ್ನು ಸಂಪಾದಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು.
ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ ಕಾರ್ಯಕ್ರಮವನ್ನು ಉದ್ಘಾಟಿಸಿ , ಅಧ್ಯಕ್ಷತೆಯನ್ನು ವಹಿಸಿ ಪ್ರತಿಯೊಂದು ಸಂಸ್ಥೆಯು ಯಶಸ್ವಿಯಾಗಿ ಮುನ್ನಡೆಯುವಲ್ಲಿ ನಾಯಕತ್ವ, ಶೈಕ್ಷಣಿಕ ವಾತಾವರಣ ಬಹಳ ಮುಖ್ಯ ಎಂದು ಪ್ರೇರಣಾತ್ಮಕ ಮಾತುಗಳಿಂದ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು .
ಈ ಸಂದರ್ಭದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮದಲ್ಲಿ ಆಯೋಜಿಸಲಾದ ‘ತುಳುವ ಬದುಕಿನ ಅನಾವರಣ’ ಎಂಬ ಸ್ಪರ್ಧೆಯ ಬಹುಮಾನ ವಿಜೇತರ ಪಟ್ಟಿಯನ್ನು ಅರ್ಥಶಾಸ್ತ್ರ ಉಪನ್ಯಾಸಕಿ ಸೌಮ್ಯ.ಎನ್ ಘೋಷಿಸಿದರು.
ದ್ವಿತೀಯ ಪದವಿ ವಿಭಾಗದ ವಿದ್ಯಾರ್ಥಿ ಸಫಾ ತಸ್ಮಿಯ ಸ್ವಾಗತಿಸಿ , ಸಂಚಿತ್ ದ್ವಿತೀಯ ಬಿ.ಕಾಂ ವಂದಿಸಿ , ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಸುರಕ್ಷಾ ಹಾಗೂ ನಿಶ್ಮಿತಾ, ತ್ರಿಶಾ ಕಾರ್ಯಕ್ರಮ ನಿರೂಪಿಸಿದರು . ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿವಿಧ ಮನೋರಂಜನಾ ಸ್ಪರ್ಧೆಗಳನ್ನು ಆಯೋಜಿಸಿದರು . ಬೋಧಕ ಬೋಧಕೇತರ ವೃಂದದವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ವು ಸಂಪನ್ನಗೊಂಡಿತು .