ಕುಂಜಿಬೆಟ್ಟು, 26 ನವೆಂಬರ್ 2025: ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ನವೆಂಬರ್ 26 ರಂದು ಕಾಲೇಜಿನ ಸಂಸ್ಥಾಪಕರಾದ ಶ್ರೀ ಉಪೇಂದ್ರ ಅನಂತ ಪೈಗಳ 130ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.
ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಆಶಾ ಕುಮಾರಿ ಪೈಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರ ಜೀವನದ ಸಾಧನೆ ಮತ್ತು ಕೊಡುಗೆಗಳ ಬಗೆಗೆ ವಿವರಿಸಿದರು.ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ಶ್ರೀ ರವಿರಾಜ್ ಹೆಚ್. ಪಿ, ಉಪನ್ಯಾಸಕರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.