ಉಡುಪಿ, ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ರಕ್ತದಾನದ ಮಹತ್ವದ ಕುರಿತಾಗಿ ರಕ್ತದಾನ ಮಹಾದಾನ ಎಂಬ ಜನಜಾಗೃತಿ ಕಾರ್ಯಕ್ರಮ ಎಪ್ರಿಲ್ 9ರಂದು ಜರಗಿತು.
ಕೆ.ಎಂ.ಸಿ ಆಸ್ಪತ್ರೆ ಮಣಿಪಾಲದ ರಕ್ತ ನಿಧಿ ಘಟಕದ ಡಾ. ವಿವೇಕ್ ವಿದ್ಯಾರ್ಥಿಗಳಿಗೆ ರಕ್ತದಾನದ ಮಹತ್ವದ ಕುರಿತಾಗಿ ಮಾತನಾಡುತ್ತಾ 18 ವರ್ಷ ಮೇಲ್ಪಟ್ಟವರು ವರ್ಷಕ್ಕೆರಡು ಬಾರಿ ರಕ್ತದಾನ ಮಾಡುವುದರಿಂದ ಆರೋಗ್ಯ ವೃದ್ಧಿಯಾಗಿ ತನ್ಮೂಲಕ ಸಮಾಜಕ್ಕೆ ಕೊಡುಗೆ ನೀಡಿದಂತೆ ಆಗುತ್ತದೆ, ರಕ್ತದಾನದ ಬಗ್ಗೆ ಸಮಾಜದಲ್ಲಿ ಸಾಕಷ್ಟು ಅಪನಂಬಿಕೆಗಳಿವೆ ಇದಕ್ಕೆ ಕಿವಿಗೊಡದೆ ರಕ್ತದಾನ ಮಾಡಿ ಅಮೂಲ್ಯ ಜೀವಗಳನ್ನು ರಕ್ಷಿಸುವ ಜೊತೆಗೆ ಸ್ವಾಸ್ಥ್ಯ ಸಮಾಜ ರೂಪಿಸಲು ಸಾಧ್ಯ ಎಂದು ತಿಳಿಸಿದರು.
ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಪ್ರಭಾ ಕಾಮತ್ ಅಧ್ಯಕ್ಷತೆ ವಹಿಸಿದ್ದರು.
ನಿರ್ದೇಶಕರಾದ ಶ್ರೀಮತಿ ಆಶಾ ಕುಮಾರಿ, ಎನ್.ಎಸ್.ಎಸ್ ಯೋಜನಾಧಿಕಾರಿ ಶ್ರೀ ರಾಜೇಶ್ ಕುಮಾರ್ ಉಪಸ್ಥಿತರಿದ್ದರು. ತೃತೀಯ ಬಿಬಿಎ ಸಿಂಚನ ಸ್ವಾಗತಿಸಿದರು, ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿಯರಾದ ಸಿಂಚನ ವಂದಿಸಿದರು, ಐಶ್ವರ್ಯ ನಿರೂಪಿಸಿದರು.