ಕುಂಜಿಬೆಟ್ಟು, 16 ಅಕ್ಟೋಬರ್ 2025: ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಗುಲಾಬಿ ಶಿವರಾಮ ನೋಂಡ ಪರ್ಯಾಯ ಟ್ರೋಫಿಗಾಗಿ ಮಂಗಳೂರು ವಿ ವಿ ಅಂತರ್ಕಾಲೇಜು ಪುರುಷರ ಮತ್ತು ಮಹಿಳೆಯರ ಚೆಸ್ ಪಂದ್ಯಾಟಕ್ಕೆ ಚಾಲನೆ ನೀಡಲಾಯಿತು.
ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ಶ್ರೀ ಹರಿಪ್ರಸಾದ್ ರೈ ದೀಪ ಬೆಳಗಿಸಿ ಉದ್ಘಾಟಿಸುತ್ತಾ, ಆರೋಗ್ಯಯುತ ಮತ್ತು ಭವ್ಯ ಭಾರತ ನಿರ್ಮಿಸಲು ಪ್ರತಿಯೊಬ್ಬರೂ ಮಾನಸಿಕ , ದೈಹಿಕ ಆರೋಗ್ಯ ಹೊಂದಬೇಕು ಅದು ಕ್ರೀಡೆಯಿಂದ ಸಾಧ್ಯ ಎಂದು ತಿಳಿಸಿದರು.
ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಜೆರಾಲ್ಡ್ ಸಂತೋಷ್ ಡಿಸೋಜ ಆಯೋಜಕರಿಗೆ ಕೃತಜ್ಞತೆ ಸಲ್ಲಿಸಿ, ಕ್ರೀಡೆಯಲ್ಲಿ ವಿದ್ಯಾರ್ಥಿಗಳ ಸಹಭಾಗಿತ್ವದ ಮಹತ್ವವನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ನಿಕಟಪೂರ್ವ ನಿರ್ದೇಶಕರು ಹಾಗೂ ಪ್ರಭಾರ ಉಪ ಕುಲಪತಿಗಳೂ ಆಗಿದ್ದ ಇತ್ತೀಚೆಗೆ ನಮ್ಮನ್ನಗಲಿದ ಡಾ. ಕಿಶೋರ್ ಕುಮಾರ್ ಸಿ ಕೆ ಅವರ ಸದ್ಗತಿಗಾಗಿ ಒಂದು ನಿಮಿಷದ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.
ಕಾಲೇಜಿನ ಪ್ರಾಚಾರ್ಯರಾದ ಪ್ರೊ ಆಶಾ ಕುಮಾರಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಗಣೇಶ್ ಕೋಟ್ಯಾನ್ ಸ್ವಾಗತಿಸಿದರು, ತೃತೀಯ ಬಿ ಬಿ ಎ ಸನ್ನಿಧಿ ಶೆಟ್ಟಿ ವಂದಿಸಿದರು, ಕಾವ್ಯ ನಿರೂಪಿಸಿದರು.