ಕುಂಜಿಬೆಟ್ಟು: ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ ಜಾನಪದ ಪರಿಷತ್ ಬೆಂಗಳೂರು ಹಾಗು ಉಡುಪಿ ಜಿಲ್ಲಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 21 ರಂದು ವಿಕಾಸಕ್ಕಾಗಿ ಜಾನಪದ ಎಂಬ ಜಾನಪದ ಸಂಗೀತ ಮತ್ತು ಗೌರವ ಸನ್ಮಾನ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದ ಉದ್ಘಾಟಕರಾದ ಪ್ರಾಚಾರ್ಯೆ ಶ್ರೀಮತಿ ಆಶಾ ಕುಮಾರಿ ಯವರು ಜಾನಪದ ಭಾಷೆ ಮನಸ್ಸಿನ ಭಾಷೆಯಾಗಿದೆ ಜಾನಪದ ದೇವರ ಇರುವಿಕೆಯನ್ನು ಮತ್ತು ಪ್ರಕೃತಿಯ ಅಸ್ಮಿತೆಯನ್ನು ತೋರಿಸುತ್ತದೆ ಹಾಗೆಯೇ ಜಾನಪದ ಸಾಹಿತ್ಯ ಭಾವನಾತ್ಮಕವಾಗಿದೆ, ಧಾರ್ಮಿಕ ಲೇಪನವಿದೆ, ಬದುಕಿನ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ತರ ಪಾತ್ರವಿದೆ ಎಂದರು, ಈಗಿನ ಯುವ ಜನತೆ ಜಾನಪದದ ಒಳಹೊಕ್ಕು ಜೀವನ ಶೈಲಿಯನ್ನು ರೂಪಿಸಿಕೊಂಡಲ್ಲಿ ಆರೋಗ್ಯಕರ ಜೀವನ ನಡೆಸಬಹುದು ಎಂದು ಉದಾಹರಣೆ ಮುಖೇನ ವಿವರಿಸಿದರು.

ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರಾದ ಡಾ. ಗಣೇಶ್ ಗಂಗೊಳ್ಳಿ ಯವರು ಪ್ರಾಸ್ತಾವಿಕ ನುಡಿಯಲ್ಲಿ ಇನ್ನೊಬ್ಬರ ಒಳತಿಗಾಗಿ ಹಾರೈಸುವ ಸಂಸ್ಕೃತಿ ಜಾನಪದದ್ದಾಗಿದೆ ಎಂದು ವಿವಿಧ ಜಾನಪದ ಗೀತೆಗಳನ್ನು ಹಾಡುವ ಮೂಲಕ ಜಾನಪದದ ಪ್ರಸ್ತುತತೆ ಅರಿವು ಮೂಡಿಸಿದರು.

ಕುಂದಾಪುರ ನೇರಳಕಟ್ಟೆ ಯ ಯೋಗಗುರು ಪ್ರಸ್ತುತ ವಿಯೆಟ್ನಾಮ್ ನಲ್ಲಿ ಯೋಗ ಶಿಕ್ಷಕರಾಗಿರುವ ಶ್ರೀ ದೇವರಾಜ್ ದೇವಾಡಿಗ ಅವರನ್ನು ಉಡುಪಿ ಜಿಲ್ಲಾ ಘಟಕದ ಪರವಾಗಿ ಸನ್ಮಾನಿಸಲಾಯಿತು. ಉಡುಪಿ ತಾಲ್ಲೂಕು ಘಟಕದ ಅಧ್ಯಕ್ಷರಾದ ಶ್ರೀಮತಿ ಮಾಯ ಕಾಮತ್, ಪದಾಧಿಕಾರಿ ಶ್ರೀಮತಿ ಪ್ರಭಾ ರಾವ್ ಉಪಸ್ಥಿತರಿದ್ದರು.

ಕಾಲೇಜಿನ ವಾಣಿಜ್ಯ ಉಪನ್ಯಾಸಕ ಶ್ರೀ ರಾಘವೇಂದ್ರ ಜಿ ಜಿ ವಂದಿಸಿದರು. ಉಡುಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಶ್ರೀ ರಾಘವೇಂದ್ರ ಕರ್ವಾಲು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸಭಾಕಾರ್ಯಕ್ರಮದ ನಂತರ ಡಾ. ಗಣೇಶ್ ಗಂಗೊಳ್ಳಿ ಯವರಿಂದ ಜಾನಪದ ಸಂಗೀತ ಕಾರ್ಯಕ್ರಮ ಮೂಡಿಬಂದಿತು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…