ಉಡುಪಿ, 26 ನವೆಂಬರ್ 2025: ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ನವೆಂಬರ್ 26ರಂದು ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತಕ್ಕೆ ಸರ್ವಶ್ರೇಷ್ಠ ಸಂವಿಧಾನ ನೀಡಿದ ಎಲ್ಲರನ್ನು ಸ್ಮರಿಸಲು ‘ಸಂವಿಧಾನ ದಿನ’ ಆಚರಿಸಲಾಯಿತು.
ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ಶ್ರೀ ರವಿರಾಜ್ ಹೆಚ್. ಪಿ ಸಂವಿಧಾನದ ಮಹತ್ವವನ್ನು ತಿಳಿಸಿ, ಪ್ರತಿಯೊಬ್ಬರು ಭಾರತದ ಸಂವಿಧಾನವನ್ನು ಗೌರವಿಸಬೇಕು ಎಂದು ನುಡಿದರು.ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಆಶಾ ಕುಮಾರಿ ಅಧ್ಯಕ್ಷತೆ ವಹಿಸಿ, ಸಂವಿಧಾನ ವಿಧಿ ಬೋಧಿಸಿದರು.
ಉಪಪ್ರಾಚಾರ್ಯರಾದ ಶ್ರೀ ರಾಧಾಕೃಷ್ಣ ರಾವ್, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಪ್ರಭಾ ಕಾಮತ್, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಶ್ರೀ ರಾಜೇಶ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಎನ್ ಎಸ್ ಎಸ್ ಸಹಯೋಜನಾಧಿಕಾರಿ ಶ್ರೀ ಚಂದ್ರಶೇಖರ್ ಕಾರ್ಯಕ್ರಮ ಸಂಯೋಜಿಸಿದರು.ಕನ್ನಡ ಉಪನ್ಯಾಸಕ ಶ್ರೀ ಶಶಿಕಾಂತ್ ಎಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.