ಉಡುಪಿ, 29 ಅಕ್ಟೋಬರ್ 2025: ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಉಡುಪಿ ಜಿಲ್ಲಾಡಳಿತ ಮತ್ತು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ತಂಬಾಕು ಮುಕ್ತ ಯುವಪೀಳಿಗೆ ಅಭಿಯಾನ -3 ಎಂಬ ಜಾಗೃತಿ ಮೂಡಿಸುವ ಕಾರ್ಯಕ್ರಮ ಕಾಲೇಜಿನ ಉಪೇಂದ್ರ ಮಂಟಪದಲ್ಲಿ ನಡೆಯಿತು.
ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಟಿ.ಕೆ ಯವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ತಂಬಾಕು ಸೇವನೆಯಿಂದ ಸೇವನೆ ಮಾಡುವ ಕುಟುಂಬಕ್ಕೆ ಮಾತ್ರ ತೊಂದರೆಯಲ್ಲ ಪೂರ್ತಿ ಸಮಾಜಕ್ಕೆ ತೊಂದರೆಯಾಗಲಿದೆ. ವಿದ್ಯಾರ್ಥಿಗಳು ಜಾಗೃತರಾಗಿ ಸಮಾಜದಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿ ಹೊರಬೇಕು. ತನ್ಮೂಲಕ ನಮ್ಮ ರಾಷ್ಟ್ರ ಸ್ವಾಸ್ತ್ಯ ಸದೃಢವಾಗಬೇಕೆಂದರು. ತದನಂತರ ಪ್ರತಿಜ್ಞಾವಿಧಿ ಬೋಧಿಸಿ, ಭಿತ್ತಿಪತ್ರ ಅನಾವರಣಗೊಳಿಸಿದರು.
ಸಮುದಾಯ ಆರೋಗ್ಯ ವಿಭಾಗ ಕೆ.ಎಂ. ಸಿ ಮಣಿಪಾಲದ ಪ್ರಾಧ್ಯಾಪಕರಾಗಿರುವ ಡಾ. ಮುರಳೀಧರ ಕುಲಕರ್ಣಿಯವರು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಇವರು ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತಂತೆ ವಿದ್ಯಾರ್ಥಿಗಳಿಗೆ ಹಲವಾರು ಉದಾಹರಣೆಗಳನ್ನು ನೀಡುವ ಮೂಲಕ ಅರಿವು ಮೂಡಿಸಿದರು. ಉಡುಪಿ ಹಾಗೂ ದ. ಕ ಜಿಲ್ಲೆಯಲ್ಲಿ ತಂಬಾಕು ಉತ್ಪನ್ನಗಳನ್ನು ಬಳಸುವವರ ಪ್ರಮಾಣ ಬೇರೆ ಜಿಲ್ಲೆಗಳಿಗಿಂತ ಕಡಿಮೆ ಇದೆ. ಇನ್ನುಾ ಸುಧಾರಣೆ ಆಗಬೇಕು ಅದಕ್ಕಾಗಿ ವಿದ್ಯಾರ್ಥಿಗಳು ತಾವೂ ಉಪಯೋಗಿಸದೆ ಸಮಾಜದಲ್ಲಿ ಜಾಗೃತಿಯನ್ನು ಮೂಡಿಸುವ ಕೆಲಸ ಮಾಡಬೇಕೆಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ್ ಹುಬ್ಬಳ್ಳಿ ಉಪಸ್ಥಿತರಿದ್ದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯರಾದ ಶ್ರೀಮತಿ ಆಶಾ ಕುಮಾರಿಯವರು ಅಧ್ಯಕ್ಷತೆ ವಹಿಸಿ ಸರ್ವರನ್ನು ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಶ್ರೀ ರಾಜೇಶ್ ಕುಮಾರ್ ವಂದಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲಾ ಆರೋಗ್ಯ ಸಲಹೆಗಾರರಾದ ಶ್ರೀಮತಿ ಮಂಜುಳಾ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿದರು.
ಕನ್ನಡ ಉಪನ್ಯಾಸಕ ಶ್ರೀ ಶಶಿಕಾಂತ್ ಎಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಸೆಂಟರ್ ಫಾರ್ ರೀಜಿನಲ್ ಡೆವಲಪ್ಮೆಂಟ್ ಪಿ.ಎಸ್.ಪಿ.ಎಚ್ ಮಾಹೆ ಮಣಿಪಾಲ ಇದರ ವಿದ್ಯಾರ್ಥಿಗಳಿಂದ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತಂತೆ ಕಿರುಪ್ರಹಸನ ನಡೆಯಿತು.