ಕುಂಜಿಬೆಟ್ಟು,10 ಮೇ 2025: ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ಸಂಘದ ವತಿಯಿಂದ ಪದವಿ ವಿದ್ಯಾರ್ಥಿಗಳಿಗೆ ಸ್ವ ವಿವರ ತಯಾರಿ ವಿಧಾನ, ಲಿಂಕ್ಡ್ ಇನ್ ಪ್ರೊಫೈಲ್, ಉದ್ಯೋಗ ಸಂದರ್ಶನ ಪ್ರಕ್ರಿಯೆ ಯ ಕುರಿತಾದ ವಿಶೇಷೋಪನ್ಯಾಸ ಜರಗಿತು.
ಕಾಲೇಜಿನ ಹಳೆ ವಿದ್ಯಾರ್ಥಿನಿ ಹಾಗು ಹಿರಿಯ ಪ್ರಬಂಧಕಿ ಶ್ರೀಮತಿ ಆರತಿ ಕಾಮತ್ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ಮೂಲಕ ಪ್ರಸ್ತುತ ಕಾಲಘಟ್ಟದ ಆದ್ಯತೆಗಳ ಬಗೆಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಚಾರ್ಯೆ ಶ್ರೀಮತಿ ಆಶಾ ಕುಮಾರಿ ಅಧ್ಯಕ್ಷತೆ ವಹಿಸಿದ್ದರು.
ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಪ್ರಭಾ ಕಾಮತ್ ಕಾರ್ಯಕ್ರಮ ಸಂಯೋಜಿಸಿದರು.