ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆ, ಹಳೆಕೋಟೆ, ಬೆಳ್ತಂಗಡಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಅವರು ಕನ್ನಡ ರಾಜ್ಯೋತ್ಸವದ ಮಹತ್ವದ ಕುರಿತು ಮಾತನಾಡಿ, ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಉಳಿವು ಹಾಗೂ ಬೆಳವಣಿಗೆಯಲ್ಲಿ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯನ್ನು ತಿಳಿಸಿದರು. ಭಾಷಾವಾರು ರಾಜ್ಯಗಳ ರಚನೆಯ ಸಂದರ್ಭದಲ್ಲಿ ಕನ್ನಡ ನಾಡಿನ ಏಕೀಕರಣಕ್ಕಾಗಿ ಕನ್ನಡಿಗರು ನಡೆಸಿದ ಹೋರಾಟ, ತ್ಯಾಗ ಮತ್ತು ಪರಿಶ್ರಮವನ್ನು ಸ್ಮರಿಸಿ, ಕನ್ನಡ ಭಾಷೆಯ ಗೌರವ ಮತ್ತು ಅಸ್ಮಿತೆಯನ್ನು ಕಾಪಾಡುವಂತೆ ರಾಜ್ಯೋತ್ಸವದ ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್ ಹಾಗೂ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಸುಹಾಸಿನಿ ಉಪಸ್ಥಿತರಿದ್ದರು. ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ. ಅವರು ಸ್ವಾಗತಿಸಿ, ವಂದಿಸಿದರು.