ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜು, ಬೆಳ್ತಂಗಡಿ,ತರಗತಿವಾರು ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸುವ ಕಾರ್ಯಕ್ರಮ ‘ಅಭಿನಂದನಂ 2026’ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ವಾಣಿ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಶ್ರೀ ಜಯಾನಂದ ಗೌಡ ಪ್ರಜ್ವಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಳೆಕೋಟೆಯ ವಿನಾಯಕ ರೈಸ್ ಮಿಲ್ನ ಮಾಲಕರಾದ ಶ್ರೀ ಶ್ರೀಕಾಂತ್ ಕಾಮತ್ ಹಾಗೂ ಕಿಟ್ಟೆಲ್ ಮೆಮೋರಿಯಲ್ ಪದವಿಪೂರ್ವ ಕಾಲೇಜು, ಮಂಗಳೂರಿನ ಪ್ರಾಂಶುಪಾಲರಾದ ಶ್ರೀ ವಿಠಲ ಎ. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷರು ಹಾಗೂ ಮುಖ್ಯ ಅತಿಥಿಗಳು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆ, ಪರಿಶ್ರಮ, ಶಿಸ್ತು ಮತ್ತು ಸಾಧನೆಯ ಮಹತ್ವವನ್ನು ತಿಳಿಸಿ, ವಿಜೇತ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ವಾಣಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವಿಷ್ಣು ಪ್ರಕಾಶ್ ಎಂ. ಸ್ವಾಗತಿಸಿದರು. ವಾಣಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಲಕ್ಷ್ಮೀನಾರಾಯಣ, ವಾಣಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಶ್ರೀ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು.
ವಿವಿಧ ಸ್ಪರ್ಧೆಗಳ ವಿಜೇತರ ಪಟ್ಟಿಯನ್ನು ಉಪನ್ಯಾಸಕರಾದ ಮಹಾಬಲ ಗೌಡ, ಉಪನ್ಯಾಸಕಿ ಶ್ರೀಮತಿ ದೀಕ್ಷಾ ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕ ಅಕ್ಷತ್ ಕೆ. ವಾಚಿಸಿದರು. ಕಾರ್ಯಕ್ರಮವನ್ನು ಉಪನ್ಯಾಸಕರಾದ ಬೆಳ್ಳಿಯಪ್ಪ ಕೆ. ಮತ್ತು ಶ್ರೀಮತಿ ಶೃತಿ ನಿರೂಪಿಸಿದರು. ಉಪನ್ಯಾಸಕ ಶಂಕರ್ ರಾವ್ ವಂದನಾರ್ಪಣೆಗೈದರು.