ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜು, ಹಳೆಕೋಟೆ ಬೆಳ್ತಂಗಡಿಯ ಐಟಿ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಲ್ಲಿ ಕೃತಕ ಬುದ್ಧಿಮತ್ತೆ (Artificial Intelligence) ಕುರಿತ ಅರಿವು ಮೂಡಿಸುವ ಉದ್ದೇಶದಿಂದ ‘DECODE AI – Unlock the Intelligence Within’ ಎಂಬ ವಿಶೇಷ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಸಿಇಒ ಯತೀರಾಜ್ ಅವರು ಕೃತಕ ಬುದ್ಧಿಮತ್ತೆಯ ಬೆಳವಣಿಗೆ, ಅದರ ವಿವಿಧ ಅನ್ವಯಗಳು ಹಾಗೂ ಭವಿಷ್ಯದ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಮೂಲಕ ಜ್ಞಾನ ಮತ್ತು ಕೌಶಲ್ಯಗಳನ್ನು ವೃದ್ಧಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ. ವಹಿಸಿದ್ದರು. ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಡಿಯೋನ ಪರ್ಲ್ ಮತ್ತು ಚೈತನ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಪೂರ್ಣೇಶ್ ಸ್ವಾಗತಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಐಟಿ ಕ್ಲಬ್ ಸಂಯೋಜಕಿ ದೀಕ್ಷಿತಾ ಅವರು ಬಹುಮಾನ ವಾಚನ ಮಾಡಿದರು. ಸಮಗ್ರ ಪ್ರಶಸ್ತಿಯನ್ನು ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಸುಧೀರ್ ಕೆ. ಎನ್. ಘೋಷಿಸಿದರು.

ವಿದ್ಯಾರ್ಥಿಗಳಲ್ಲಿ ತಂತ್ರಜ್ಞಾನ ಜ್ಞಾನ, ಸೃಜನಶೀಲತೆ ಹಾಗೂ ನವೀನ ಆಲೋಚನೆಗಳನ್ನು ಬೆಳೆಸುವುದರೊಂದಿಗೆ ಕೃತಕ ಬುದ್ಧಿಮತ್ತೆಯ ಸಾಧ್ಯತೆಗಳನ್ನು ಅರಿತುಕೊಳ್ಳಲು ಈ ಕಾರ್ಯಕ್ರಮ ವೇದಿಕೆಯಾಯಿತು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…