ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಸದ್ಭಾವನಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನದ ಮಹತ್ವವನ್ನು ತಿಳಿಸಿ, ಸದ್ಭಾವನಾ ದಿನದ ಪ್ರಮಾಣ ವಚನವನ್ನು ಬೋಧಿಸಿದರು. ವಿದ್ಯಾರ್ಥಿಗಳು ಶಾಂತಿ, ಸೌಹಾರ್ದತೆ, ಏಕತೆ, ಸಹಬಾಳ್ವೆ ಹಾಗೂ ಪರಸ್ಪರ ಗೌರವದ ಮನೋಭಾವವನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ದಿನೇಶ್ ಗೌಡ ಹಾಗೂ ಸಹಕಾರ್ಯಕ್ರಮಾಧಿಕಾರಿ ಕು. ಶ್ರಾವ್ಯ ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.

ಸದ್ಭಾವನೆ, ಸಹೋದರತ್ವ ಮತ್ತು ರಾಷ್ಟ್ರೀಯ ಏಕತೆಯ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಆಯೋಜಿಸಲಾದ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…